ಈ ದಿನದ ಪ್ರಮುಖ 10 ಸುದ್ದಿಗಳು: ಭಾನುವಾರ, 26 ಜುಲೈ 2026
ರಾಜ್ಯ, ರಾಷ್ಟ್ರೀಯ, ವಿದೇಶ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯಸಿದ್ದರಾಮಯ್ಯ, ಮುಖ್ಯಮಂತ್ರಿಕೆ.ಆರ್.ಪೇಟೆ (ಮಂಡ್ಯ): ‘ಯಾವುದೇ ಕಾರಣಕ್ಕೂ 2028ರ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂದು ತೀರ್ಮಾನಿಸಿದ್ದೇನೆ. ಆದರೆ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುವುದಿಲ್ಲ’ ಎಂದು ಮಾಜಿ

ರಾಜ್ಯ, ರಾಷ್ಟ್ರೀಯ, ವಿದೇಶ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯಸಿದ್ದರಾಮಯ್ಯ, ಮುಖ್ಯಮಂತ್ರಿಕೆ.ಆರ್.ಪೇಟೆ (ಮಂಡ್ಯ): ‘ಯಾವುದೇ ಕಾರಣಕ್ಕೂ 2028ರ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂದು ತೀರ್ಮಾನಿಸಿದ್ದೇನೆ. ಆದರೆ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿನೋಟಿಸ್ ನೀಡಲು ಮುಂದಾದ ಪೊಲೀಸರು: ನಿರಾಕರಿಸಿದ ಸಿ.ಟಿ.ರವಿ,ಕಾರ್ಯಕರ್ತರ ಪ್ರತಿಭಟನೆಸಿ.ಟಿ. ರವಿಚಿಕ್ಕಮಗಳೂರು: ಮುಲ್ಲಾನಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ ಎಂದು ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಮುಂದಾದರು. ಆದರೆ, ನೋಟಿಸ್ ಪಡೆಯಲು ನಿರಾಕರಿಸಿದ ಸಿ.ಟಿ.ರವಿ ಮನೆಗೆ ಪ್ರತಿಯನ್ನು ಪೊಲೀಸರು ಅಂಟಿಸಿದರು.ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿಕೆಪಿಎಸ್ಸಿ ಹಗರಣ: ಶಿವಶಂಕರಪ್ಪ ವಿರುದ್ಧ ಎಫ್ಐಆರ್ಬೆಂಗಳೂರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ನೀಡಿದ ದೂರಿನ ಮೇರೆಗೆ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಎಸ್. ಸಾಹುಕಾರ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿಪ್ರಶ್ನೆ ಪತ್ರಿಕೆ ಸೋರಿಕೆ | ಅಮಿತ್ ಶಾ ರಾಜೀನಾಮೆ ನೀಡಬೇಕು: ಬಿ.ಕೆ. ಹರಿಪ್ರಸಾದ್ಬಿ.ಕೆ. ಹರಿಪ್ರಸಾದ್ ಬೆಂಗಳೂರು: ‘ಪ್ರಶ್ನೆ ಪತ್ರಿಕೆ ಸೋರಿಕೆ ಅನಾಹುತಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ಕೂಡಾ ರಾಜೀನಾಮೆ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು.ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿಟೈಫಾಯ್ಡ್ನಿಂದ ಬಳಲುತ್ತಿರುವ ದೀಪ್ಕೆ, ಸಹಜ ಸ್ಥಿತಿಯತ್ತ ಜಂತರ್ ಮಂತರ್ಅಭಿಜಿತ್ ದೀಪ್ಕೆನವದೆಹಲಿ: ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕಳೆದ 36 ದಿನಗಳಿಂದ ನಡೆಯುತ್ತಿದ್ದ ಹೋರಾಟವು ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆಯೊಂದಿಗೆ ಅಂತ್ಯಗೊಂಡಿದೆ. ಇದರೊಂದಿಗೆ ಭಾನುವಾರ ಜಂತರ್ ಮಂತರ್ ಸಹಜ ಸ್ಥಿತಿಯತ್ತ ಮರಳುತ್ತಿದೆ. ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ16ನೇ ವಯಸ್ಸಿನಲ್ಲಿ ಮೌಂಟ್ ಎವರೆಸ್ಟ್ ಏರಿ ದಾಖಲೆ ಬರೆದ ನಿಶಾ...ನಿಶಾ ಶಶಿಕುಮಾರ್ಜಗತ್ತಿನ ಅತಿ ಎತ್ತರದ ಹಿಮ ಶಿಖರ ಮೌಂಟ್ ಎವರೆಸ್ಟ್ ಅನ್ನು ಏರುವುದು ಪ್ರತಿಯೊಬ್ಬ ಪರ್ವತಾರೋಹಿಯ ಕನಸು. ಅದಕ್ಕಾಗಿ ವರ್ಷಗಟ್ಟಲೇ ತರಬೇತಿ ಪಡೆದುಕೊಂಡು ಪರ್ವತ ಏರುತ್ತಾರೆ. ಆ ಪೈಕಿ ಕೆಲವರು ಮಾತ್ರ ಸಫಲರಾಗುತ್ತಾರೆ. ಮೌಂಟ್ ಎವರೆಸ್ಟ್ ಅನ್ನು 16ನೇ ವಯಸ್ಸಿನಲ್ಲಿಯೇ ಏರುವ ಮೂಲಕ ಯಾರೂ ಮಾಡದ ದಾಖಲೆಯನ್ನು ತಮಿಳುನಾಡಿನ ನಿಶಾ ಶಶಿಕುಮಾರ್ ಮಾಡಿದ್ದಾರೆ. ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿವಿದ್ಯಾರ್ಥಿಗಳ ಮೇಲಿನ ಹಲ್ಲೆಗೆ ನೀವು ಅನುಮತಿ ನೀಡಿದ್ದೀರಾ?:ಶಾಗೆ ರಾಹುಲ್ ಪ್ರಶ್ನೆನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಅಮಾನವೀಯ ಹಲ್ಲೆಯ ಹೊಣೆಗಾರಿಕೆಯನ್ನು ಪ್ರಶ್ನಿಸಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಅಧಿಕಾರ ಸ್ವೀಕಾರಪ್ರಲ್ಹಾದ ಜೋಶಿನವದೆಹಲಿ: ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಅವರು ಇಂದು (ಭಾನುವಾರ) ಅಧಿಕಾರ ಸ್ವೀಕರಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ವಿವಾದ ಬೆನ್ನಲ್ಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೆಂದ್ರ ಪ್ರಧಾನ್ ಶನಿವಾರ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಜೋಶಿ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಪ್ರಾಚೀನ ಬೌದ್ಧ ತಾಣ 'ಸಾರನಾಥ' ಚಿತ್ರ –@UNESCOನವದೆಹಲಿ: ಪ್ರಾಚೀನ ಬೌದ್ಧ ತಾಣವಾದ ಉತ್ತರ ಪ್ರದೇಶದ 'ಸಾರನಾಥ' ಈಗ ಯುನೆಸ್ಕೋ ವಿಶ್ವ ಪಾರಂಪರಿಕ ತಾಣದ ಸಾಲಿಗೆ ಸೇರ್ಪಡೆಯಾಗಿದೆ. ಈ ಗೌರವ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ಕ್ಷಣ ಎಂದು ಬಣ್ಣಿಸಿದ್ದಾರೆ.ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ʼಕಾಕ್ರೋಚ್ʼ ಮುಂದಿನ ನಡೆ ಏನು?ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಕಾಕ್ರೋಚ್ ಪಕ್ಷದ ನಾಯಕರ ಸಂಭ್ರಮನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಇತರ ಪರೀಕ್ಷಾ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಒಂದು ತಿಂಗಳಿಗೂ ಹೆಚ್ಚು ಸಮಯ ಪಟ್ಟು ಬಿಡದೆ ಪ್ರತಿಭಟನೆ ನಡೆಸಿತ್ತು. ಅವರ ಹೋರಾಟಕ್ಕೆ ವಿದ್ಯಾರ್ಥಿಗಳ ಬೆಂಬಲವೂ ದೊರೆತಿತ್ತು.ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ