CJP Protest| ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅರೆಸ್ಟ್
ನವದೆಹಲಿ: ಜಂತರ್ ಮಂತರ್ನಲ್ಲಿ(Jantar Mantar) ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಕ್ರೋಚ್ ಜನತಾ ಪಾರ್ಟಿಯ (CJP) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಯಕರನ್ನು ಇಂದು ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್

ನವದೆಹಲಿ: ಜಂತರ್ ಮಂತರ್ನಲ್ಲಿ(Jantar Mantar) ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಕ್ರೋಚ್ ಜನತಾ ಪಾರ್ಟಿಯ (CJP) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಯಕರನ್ನು ಇಂದು ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್ಇಎಂ) ನ್ಯಾಯಾಲಯಕ್ಕೆ ಹಾಜರುಪಡಿಸಿ ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮಂಗಳವಾರ ಮುಂಜಾನೆ ಪೊಲೀಸ್ ಬ್ಯಾರಿಕೇಡ್ಗಳನ್ನು ದಾಟಿ ಜಂತರ್ ಮಂತರ್ ಪ್ರವೇಶಿಸಿದ ಈ ಮೂವರು ನಾಯಕರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. #BREAKING: Delhi Police arrests Saurav Das, Ashutosh Ranka, and Ajinkya Shinde at Parliament Street Police Station in today’s Jantar Mantar case. Trespass, bond violation, obstruction of public official’s duty, etc. They’ll be produced before the SCM Court in the morning. A possibility of Judicial Custody (JC) in the Tihar Jail is possible. They were not allowed to meet their lawyers till late at night. They were brought to Parliament Street PS at 3 AM in a private van. Despite these illegal actions, their spirits are high. @Cockroachisback — Ratna Singh (@whattalawyer) October 13, 2026 ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಿಜೆಪಿ ಕಾನೂನು ತಂಡದ ಮುಖ್ಯಸ್ಥೆ ರತ್ನಾ ಸಿಂಗ್, “ಜಂತರ್ ಮಂತರ್ ಪ್ರಕರಣದಲ್ಲಿ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಮತ್ತು ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ. ತಡರಾತ್ರಿಯವರೆಗೂ ನಾಯಕರಿಗೆ ತಮ್ಮ ವಕೀಲರನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ. ಮುಂಜಾನೆ 3:00 ಗಂಟೆಗೆ ಖಾಸಗಿ ವ್ಯಾನ್ನಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆತರಲಾಯಿತು. ಈ ಎಲ್ಲಾ ಕಾನೂನುಬಾಹಿರ ಕ್ರಮಗಳ ನಡುವೆಯೂ ಅವರ ನೈತಿಕ ಸ್ಥೈರ್ಯ ಕುಗ್ಗಿಲ್ಲ,” ಎಂದು ರತ್ನಾ ಸಿಂಗ್ ಆರೋಪಿಸಿದ್ದಾರೆ. ಇದನ್ನೂ ಓದಿ: SIR ಇತ್ತೀಚಿನದ್ದು.. ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣೆಗಳಲ್ಲಿ ಸೋಲುತ್ತಲೇ ಬಂದಿದೆ: ಅಮಿತ್ ಶಾ ವಾಗ್ದಾಳಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಅಕ್ಟೋಬರ್ 11 ರಂದು ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು ಪ್ರತಿಭಟನೆ ಮತ್ತು ಧರಣಿಗಳಿಗೆ ರಾಮ್ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್ಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಿದ್ದರು. ಈ ಆದೇಶದ ಮೂಲಕ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಜಂತರ್ ಮಂತರ್ ಅನ್ನು ಕೈಬಿಡಲಾಗಿತ್ತು.