IAS Transfer:ನಾಲ್ವರು ಐಎಎಸ್ ಅಧಿಕಾರಿಗಳ ವರ್ಗ, ಜಾಫರ್ ಬೆಂಗಳೂರು ಮೆಟ್ರೊ ಎಂಡಿ
ಬೆಂಗಳೂರು: ಕರ್ನಾಟಕ ಸರ್ಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ.ಕರ್ನಾಟಕ ಸರ್ಕಾರದ ಹಣಕಾಸು ಇಲಾಖೆಯ ಆಯವ್ಯಯ ಹಾಗೂ ಸಂಪನ್ಮೂಲ ಕಾರ್ಯದರ್ಶಿಯಾಗಿದ್ದ ಡಾ.ಪಿ.ಸಿ.ಜಾಫರ್ ಅವರನ್ನು ಬೆಂಗಳೂರು ಮೆಟ್ರೊ ರೈಲು ನಿಗಮದ( ಬಿಎಂಆರ್ ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗ ಮಾಡಲಾಗಿದೆ. ಈವರೆಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ.ಜೆ.ರವಿಶ

ಬೆಂಗಳೂರು: ಕರ್ನಾಟಕ ಸರ್ಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ.ಕರ್ನಾಟಕ ಸರ್ಕಾರದ ಹಣಕಾಸು ಇಲಾಖೆಯ ಆಯವ್ಯಯ ಹಾಗೂ ಸಂಪನ್ಮೂಲ ಕಾರ್ಯದರ್ಶಿಯಾಗಿದ್ದ ಡಾ.ಪಿ.ಸಿ.ಜಾಫರ್ ಅವರನ್ನು ಬೆಂಗಳೂರು ಮೆಟ್ರೊ ರೈಲು ನಿಗಮದ( ಬಿಎಂಆರ್ ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗ ಮಾಡಲಾಗಿದೆ. ಈವರೆಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ.ಜೆ.ರವಿಶಂಕರ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಹುದ್ದೆ ನಿರೀಕ್ಷೆಯಲ್ಲಿದ್ದ ಮತ್ತೊಬ್ಬ ಐಎಎಸ್ ಅಧಿಕಾರಿ ಡಾ.ಎಂ.ಟಿ.ರೇಜು ಅವರನ್ನು ಕರ್ನಾಟಕ ಸರ್ಕಾರದ ಹಣಕಾಸು ಇಲಾಖೆಯ ಆಯವ್ಯಯ ಹಾಗೂ ಸಂಪನ್ಮೂಲ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.ಹುದ್ದೆ ನಿರೀಕ್ಷೆಯಲ್ಲಿದ್ದ ಟಿಎಚ್ಎಂ ಕುಮಾರ್ ಅವರನ್ನು ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈವರೆಗೂ ಕೆ.ಪಿ.ಮೋಹನರಾಜ್ ಅವರು ಈ ಇಲಾಖೆಯ ಹೆಚ್ಚುವರಿ ಪ್ರಭಾರದಲ್ಲಿದ್ದರು.IAS Posting: ಐಎಎಸ್ ಅಧಿಕಾರಿ ನೇಮಕ, ಶಿವಾನಂದ ಕಾಪಶಿ ಆಹಾರ ಇಲಾಖೆ ಆಯುಕ್ತIAS Reshuffle: ಏಳು ಐಎಎಸ್ ಅಧಿಕಾರಿಗಳ ವರ್ಗ, ನಕುಲ್ ಮುಖ್ಯಮಂತ್ರಿ ಕಾರ್ಯದರ್ಶಿಐಎಎಸ್ ಅಧಿಕಾರಿಗಳ ವರ್ಗಾವಣೆ: ಇಲ್ಲಿದೆ ಸಂಪೂರ್ಣ ಮಾಹಿತಿ