IAS Transfer: ಐಎಎಸ್ ವರ್ಗಾವಣೆ, ತೋಟಗಾರಿಕೆ, ಸಕ್ಕರೆ ಇಲಾಖೆಗೆ ಹೊಸ ನಿರ್ದೇಶಕರು
ಬೆಂಗಳೂರು: ಕರ್ನಾಟಕ ಸರ್ಕಾರವು ಹಲವು ಐಎಎಸ್ ಅಧಿಕಾರಿಗಳನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ. ತೋಟಗಾರಿಕೆ ಹಾಗೂ ಸಕ್ಕರೆ ಇಲಾಖೆಗೆ ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ.ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಕೃಷ್ಣ ಬಾಜಪೇಯಿ ಅವರನ್ನು ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ (KAT) ಸದಸ್ಯರನ್ನಾಗಿನೇಮಕ ಮಾಡಲಾಗಿದೆ. ಆ ಹುದ್ದೆಯಲ್ಲಿ ಹೆಚ್ಚುವರಿ ಕಾರ್ಯಭಾರದಲ್ಲಿದ್

ಬೆಂಗಳೂರು: ಕರ್ನಾಟಕ ಸರ್ಕಾರವು ಹಲವು ಐಎಎಸ್ ಅಧಿಕಾರಿಗಳನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ. ತೋಟಗಾರಿಕೆ ಹಾಗೂ ಸಕ್ಕರೆ ಇಲಾಖೆಗೆ ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ.ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಕೃಷ್ಣ ಬಾಜಪೇಯಿ ಅವರನ್ನು ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ (KAT) ಸದಸ್ಯರನ್ನಾಗಿನೇಮಕ ಮಾಡಲಾಗಿದೆ. ಆ ಹುದ್ದೆಯಲ್ಲಿ ಹೆಚ್ಚುವರಿ ಕಾರ್ಯಭಾರದಲ್ಲಿದ್ದ ಡಿ. ಭಾರತಿ ಅವರನ್ನು ಆ ಸೇವೆಯಿಂದ ಮುಕ್ತಗೊಳಿಸಲಾಗಿದೆ.ಬೆಂಗಳೂರು ಗ್ರೇಟರ್ ಪ್ರಾಧಿಕಾರದ( GBA) ಉತ್ತರ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾಗಿದ್ದ ಆರ್.ಲತಾ ಅವರನ್ನು ಕರ್ನಾಟಕ ಗೃಹಮಂಡಳಿ( KHB) ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಬಿ.ದಯಾನಂದ ಅವರನ್ನು ವರ್ಗ ಮಾಡಲಾಗಿದೆ.ಹುದ್ದೆ ನಿರೀಕ್ಷಣೆಯಲ್ಲಿದ್ದ ಐಎಎಸ್ ಅಧಿಕಾರಿ ಎಂ.ಎಸ್.ಅರ್ಚನಾ ಅವರನ್ನು ಕರ್ನಾಟಕ ರಾಜ್ಯ ಖನಿಜ ನಿಗಮ(KAMCL) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಬಸವರಾಜು ಅವರನ್ನು ವರ್ಗ ಮಾಡಲಾಗಿದೆ.ಕರ್ನಾಟಕ ಗೃಹ ಮಂಡಳಿ ಆಯುಕ್ತರಾಗಿದ್ದ ಕೆ.ಎ.ದಯಾನಂದ ಅವರನ್ನು ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.ಹುದ್ದೆ ನಿರೀಕ್ಷಣೆಯಲ್ಲಿದ್ದ ವೆಂಕಟರಾಜ ಅವರನ್ನು ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ( KHDC)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಯ ಹೆಚ್ಚುವರಿ ಕಾರ್ಯಭಾರದಲ್ಲಿದ್ದ ಎ.ಬಿ.ಬಸವರಾಜು ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.ಹುದ್ದೆ ನಿರೀಕ್ಷಣೆಯಲ್ಲಿದ್ದ ಐಎಎಸ್ ಅಧಿಕಾರಿ ಟಿ.ವೆಂಕಟೇಶ್ ಅವರನ್ನು ಕರ್ನಾಟಕ ತೋಟಗಾರಿಕೆ ಇಲಾಖೆ ನಿರ್ದೇಶಕ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ತೋಟಗಾರಿಕೆ ನಿರ್ದೇಶಕರ ಹುದ್ದೆಯಲ್ಲಿದ್ದ ಇಬ್ರಾಹಿಂ ಮೈಗೂರ ಅವರನ್ನು ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಹುದ್ದೆ ನಿರೀಕ್ಷಣೆಯಲ್ಲಿದ್ದ ಮೊನಾರೋತ್ ಅವರನ್ನು ಜಿಬಿಎ ಬೆಂಗಳೂರು ಉತ್ತರ ನಗರಪಾಲಿಕೆ ಹೆಚ್ಚುವರಿ ಆಯುಕ್ತರನ್ನಾಗಿ ಮಾಡಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೆ.ಎ.ಎಸ್ ಅಧಿಕಾರಿ ಸಯೀದಾ ಆಯಿಷಾ ಅವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ(KSSIDC)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕಸಲಾಗಿದೆ. ಈ ಹುದ್ದೆಯ ಅಧಿಕ ಕಾರ್ಯಭಾರದಲ್ಲಿದ್ದ ಐಎಎಸ್ ಅಧಿಕಾರಿ ಆರ್.ರಾಗಪ್ರಿಯಾ ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಐಎಎಸ್ ಅಧಿಕಾರಿಗಳ ವರ್ಗಾವಣೆ