It's Time I am Comming ಎಂದ ಯಶ್: We Are All Waitnig ಎಂದ ಶಿವಣ್ಣ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾದ ಟ್ರೇಲರ್ ಶನಿವಾರ ಬಿಡುಗಡೆಯಾಗಿದೆ.ಚಂದನವನದ ‘ಸೆಂಚುರಿ ಸ್ಟಾರ್’ ಶಿವರಾಜ್ಕುಮಾರ್ ಅವರು ಟಾಕ್ಸಿಕ್ ಸಿನಿಮಾ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಚಿತ್ರತಂಡಕ್ಕೆ ಸಾಥ್ ನೀಡಿದರು.ಇದೇ ವೇಳೆ ಮಾತನಾಡಿದ ಶಿವಣ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾದ ಟ್ರೇಲರ್ ಶನಿವಾರ ಬಿಡುಗಡೆಯಾಗಿದೆ.ಚಂದನವನದ ‘ಸೆಂಚುರಿ ಸ್ಟಾರ್’ ಶಿವರಾಜ್ಕುಮಾರ್ ಅವರು ಟಾಕ್ಸಿಕ್ ಸಿನಿಮಾ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಚಿತ್ರತಂಡಕ್ಕೆ ಸಾಥ್ ನೀಡಿದರು.ಇದೇ ವೇಳೆ ಮಾತನಾಡಿದ ಶಿವಣ್ಣ, ಸಿನಿಮಾದಲ್ಲಿ ‘ಇಟ್ಸ್ ಟೈಮ್ ಐಮ್ ಕಮಿಂಗ್’ ಎಂದು ಯಶ್ ಡೈಲಾಗ್ ಹೇಳುತ್ತಾರೆಯೋ, ಅದೇ ರೀತಿ ನಾವೂ ‘ವಿಆರ್ ಅಲ್ ವೆಟ್ಟಿಂಗ್’ ಎಂದು ಹೇಳೋಣ. ಟ್ರೇಲರ್ ಅದ್ಬುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಅಭಿನಂದನೆ ಎಂದು ಹೇಳಿದರು.‘ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದೇನೆ.ಯಶ್ ಈ ರೀತಿ ದೊಡ್ಡ ಮಟ್ಟಕ್ಕೆ ಬೆಳೆದಿರುವುದು, ಕನ್ನಡಿಗನಾಗಿ ಇಷ್ಟು ದೊಡ್ಡ ಮಟ್ಟದ ಸಿನಿಮಾ ಮಾಡಿರುವುದು ನಮ್ಮೆಲ್ಲರಿಗೂ ತುಂಬಾ ಹೆಮ್ಮೆ ಎನಿಸುತ್ತದೆ. ನಾನು, ನನ್ನ ತಮ್ಮನೇ ಸಿನಿಮಾ ಮಾಡಿದ್ದಾನೆ ಎನ್ನುವಷ್ಟು ಖುಷಿಯಾಗುತ್ತಿದೆ’ ಎಂದು ತಿಳಿಸಿದರು. ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಅವರು ದ್ವಿಪಾತ್ರದಲ್ಲಿ ನಟಿಸಿದ್ದು, ಇವರೊಟ್ಟಿಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ರಾಜೀವ್ ರವಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಆಗಸ್ಟ್ 26ರಂದು ಸಿನಿಮಾ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು ಸೇರಿ ಹಲವು ಭಾಷೆಗಳಿಗೆ ಬಿಡುಗಡೆಯಾಗುತ್ತಿದೆ.ಟಾಕ್ಸಿಕ್ ಟ್ರೇಲರ್ ಬಿಡುಗಡೆ: ಸಿನಿರಸಿಕರನ್ನು ತುದಿಗಾಲಲ್ಲಿ ನಿಲ್ಲಿಸಿದ ‘ರಾಯ’