Karnataka Rain Live Updates | ಕಬಿನಿಯಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
60 min agoAugust 2, 2026 8:39 am ಭರ್ತಿಯಾದ ಕಬಿನಿ ಕೇರಳದ ವಯನಾಡು ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಕಬಿನಿ ಜಲಾಶಯ ಭರ್ತಿಯಾಗಿದೆ. ಜಲಾಶಯಕ್ಕೆ ಈಗ 30 ಸಾವಿರ ಕ್ಯೂಸೆಕ್ ಒಳ ಹರಿವಿದೆ. ಹೀಗಾಗಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 1 hr 21 min agoAugust 2, 2026 8:19 am ಕೆಆರ್ಎಸ್

60 min agoAugust 2, 2026 8:39 am ಭರ್ತಿಯಾದ ಕಬಿನಿ ಕೇರಳದ ವಯನಾಡು ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಕಬಿನಿ ಜಲಾಶಯ ಭರ್ತಿಯಾಗಿದೆ. ಜಲಾಶಯಕ್ಕೆ ಈಗ 30 ಸಾವಿರ ಕ್ಯೂಸೆಕ್ ಒಳ ಹರಿವಿದೆ. ಹೀಗಾಗಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 1 hr 21 min agoAugust 2, 2026 8:19 am ಕೆಆರ್ಎಸ್ನಲ್ಲಿ 97 ಅಡಿ ನೀರು ಸಂಗ್ರಹ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ ಕಾಣುತ್ತಿದೆ. ಎರಡು ದಿನದ ಅಂತರದಲ್ಲಿ ಐದು ಅಡಿ ನೀರು ಏರಿಕೆಯಾಗಿದ್ದು ಈಗ 97 ಅಡಿ ನೀರು ಸಂಗ್ರಹವಾಗಿದೆ. 2 hr 49 min agoAugust 2, 2026 7:51 am ಬೆಳ್ತಂಗಡಿಗೆ ಆಗಮಿಸಿದ ಎನ್ಡಿಆರ್ಎಫ್ ದಕ್ಷಿಣ ಕನ್ನಡದ ಬೆಳ್ತಂಗಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಯಿಲ ಗ್ರಾಮಕ್ಕೆ ಎನ್ಡಿಆರ್ಎಫ್ ತಂಡ ಆಗಮಿಸಿದೆ. 30 ಮಂದಿಯ ಎನ್ಡಿಆರ್ಎಫ್ ತಂಡ ಬೆಳ್ತಂಗಡಿಯಲ್ಲಿ ಬೀಡುಬಿಟ್ಟಿದೆ. 2 hr 54 min agoAugust 2, 2026 7:46 am ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು ಭಾರೀ ಮಳೆಯಿಂದಾಗಿ ಮನೆ ಮೇಲೆ ಗುಡ್ಡ ಕುಸಿದು ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ದುರ್ಘಟನೆ ತೀರ್ಥಹಳ್ಳಿ ಪಟ್ಟಣದ ತಮ್ಮಡಿಕೊಪ್ಪ ಕೆರೆ ಬಳಿ ನಡೆದಿದೆ. 2 hr 56 min agoAugust 2, 2026 7:44 am ತ್ರಿವೇಣಿ ಸಂಗಮ ಜಲಾವೃತ ಧಾರಾಕಾರ ಮಳೆಯ ಪರಿಣಾಮವಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಪ್ರಸಿದ್ಧ ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳ ಹಂತದವರೆಗೂ ಪ್ರವಾಹದ ನೀರು ಬಂದಿದ್ದು, ಭಾಗಮಂಡಲ – ನಾಪೋಕ್ಲು ನಡುವಿನ ಮುಖ್ಯ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. 2 hr agoAugust 2, 2026 7:39 am ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ಹಾಸನದ ಸಕಲೇಶಪುರ ತಾಲ್ಲೂಕಿನ, ಯಡಕುಮರಿ-ಶಿರವಾಗಿಲು ಬಳಿ ಗುಡ್ಡ ಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಮಾರ್ಗದ ಎಲ್ಲಾ ರೈಲುಗಳ ಪ್ರಯಾಣ ರದ್ದು ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಮಣ್ಣು ತೆರವು ಕಾಮಗಾರಿಯನ್ನು ರೈಲ್ವೇ ಇಲಾಖೆ ಆರಂಭಿಸಿದೆ. ಲುಗಳ ರದ್ದತಿಯಿಂದ ಪ್ರಯಾಣಿಕರ ಪರದಾಟುತ್ತಿದ್ದಾರೆ