Karnataka Rains: ಆ. 1 ರವರೆಗೆ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 1 ರವರೆಗೆ ಅಲ್ಲಲ್ಲಿ ಭಾರಿ ಮಳೆ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜುಲೈ 30 ಮತ್ತು 31 ರಂದು ಕೆಲವು ಕಡೆಗ

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 1 ರವರೆಗೆ ಅಲ್ಲಲ್ಲಿ ಭಾರಿ ಮಳೆ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜುಲೈ 30 ಮತ್ತು 31 ರಂದು ಕೆಲವು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಜುಲೈ 29,30ರಂದು ನಿರಂತರ ಗಾಳಿಯೊಂದಿಗೆ ಭಾರಿಯಿಂದ ಅತಿ ಭಾರಿ ಮಳೆಯಾಗಬಹುದು. ಜುಲೈ 31ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ನಿರಂತರ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಬಹುದು. ಆಗಸ್ಟ್ 1ರಿಂದ 3ರವರೆಗೆ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆ ನೀಡಲಾಗಿದೆ.ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಜುಲೈ 29ರಿಂದ ಅಗಸ್ಟ್ 1ರವರೆಗೆ ಒಂದೆರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹೆಚ್ಚಿನ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಆಗಸ್ಟ್ 2 ಮತ್ತು 3ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆಯಿದೆ.ದಕ್ಷಿಣ ಒಳನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಜುಲೈ 29ರಿಂದ ಆಗಸ್ಟ್ 1ರವರೆಗೆ ಭಾರಿ ಮಳೆಯಾಗುವ ಸೂಚನೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಕಡೆ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆ ನೀಡಲಾಗಿದೆ.ಆಗಸ್ಟ್ 2 ಹಾಗೂ 3 ರಂದು ಬೆಂಗಳೂರು ನಗರ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ & #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಆಗಸ್ಟ್ 1 ರವರೆಗೆ ಅಲ್ಲಲ್ಲಿ ಭಾರಿ ಮಳೆ & ಮಲೆನಾಡು ಜಿಲ್ಲೆಗಳಲ್ಲಿ ಜುಲೈ 30 & 31 ರಂದು ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.#KSNDMC pic.twitter.com/uTbrh4qzGL— Karnataka State Natural Disaster Monitoring Centre (@KarnatakaSNDMC) July 29, 2026