Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದು (ಶನಿವಾರ) ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉಳಿದಂತೆ ಆಗಸ್ಟ್ 2ರವರೆಗೆ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸುರ

ಬೆಂಗಳೂರು: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದು (ಶನಿವಾರ) ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉಳಿದಂತೆ ಆಗಸ್ಟ್ 2ರವರೆಗೆ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ ಎಂದೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಭಾರಿ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ, ವಸತಿ ಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಆದೇಶ ಉಲ್ಲಂಘಿಸಿದರೆ 2005ರ ವಿಪತ್ತು ನಿರ್ವಹಣೆ ಕಾಯ್ದೆಯ ಕಲಂ 51ಬಿ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಶುಕ್ರವಾರ ಭಾರಿ ಮಳೆಯಾದ ಪರಿಣಾಮ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಜಳಕದ ಕಟ್ಟೆ ಜಲಾವೃತವಾಗಿದೆ. ಭಕ್ತರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಕುದುರೆಮುಖ, ಕೆಮ್ಮಣ್ಣುಗುಂಡಿ, ಕಳಸ, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ವ್ಯಾಪ್ತಿಯಲ್ಲಿ ಮಳೆ ಜೋರಾಗಿದೆ. ಬಯಲುಸೀಮೆಯಾದ ಕಡೂರು ಮತ್ತು ತರೀಕೆರೆ ಭಾಗದಲ್ಲೂ ಸಾಧಾರಣ ಮಳೆಯಾಗಿದೆ.ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ : (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಆಗಸ್ಟ್ 2 ರವರೆಗೆ ಅಲ್ಲಲ್ಲಿ ಭಾರಿ ಮಳೆ & ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 1 ರಂದು ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.#KSNDMC pic.twitter.com/dxLmfTYatw— Karnataka State Natural Disaster Monitoring Centre (@KarnatakaSNDMC) August 1, 2026