3 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದಲ್ಲದೇ ಮೂರು ಜಿ್ಲ್ಲೆಗಳಲ್ಲಿ ಸೋಮವಾರ ಸಂಜೆ ಅತ್ಯಧಿಕ ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮಳೆ ಮಾಹಿತಿಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಉತ್ತರ ಕನ್ನಡ, ಉ

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದಲ್ಲದೇ ಮೂರು ಜಿ್ಲ್ಲೆಗಳಲ್ಲಿ ಸೋಮವಾರ ಸಂಜೆ ಅತ್ಯಧಿಕ ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮಳೆ ಮಾಹಿತಿಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಉತ್ತರ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯ ಒಂದು ಅಥವಾ ಎರಡು ಕಡೆಗಳಲ್ಲಿ 204.4 ಮಿ.ಮೀ ಮಳೆಯಾಗುವ ಸೂಚನೆಯಿದೆ. ಗಾಳಿಯ ವೇಗವು ಗಂಟೆಗೆ 50ರಿಂದ 60 ಕಿ.ಮೀ ನಷ್ಟು ಇರಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.ಮೂರು ಜಿಲ್ಲೆಗಳಲ್ಲಿ ಮಳೆ ಇರುವ ಕಾರಣದಿಂದ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.ಇದಲ್ಲದೇ ಜುಲೈ 7ರಿಂದ 11ರವರೆಗೆ ರಾಜ್ಯದ ಘಟ್ಟ ಪ್ರದೇಶದ ಒಂದು ಅಥವಾ ಎರಡು ಕಡೆಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯೂ ಇದೆ ಎಂದು ತಿಳಿಸಲಾಗಿದೆ.ಇದಲ್ಲದೇ ಜುಲೈ 8ರಂದು ಕರಾವಳಿ ಜಿಲ್ಲೆಗಳಲ್ಲಿ, ಜುಲೈ 7ಮತ್ತು 8ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ಜುಲೈ 6 ಮತ್ತು 7ರಂದು ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು. ಈ ದಿನಗಳಿಗೆ ಆರೆಂಜ್ ಅಲರ್ಟ್ ಅನ್ನು ನೀಡಲಾಗಿದೆ.ಕರಾವಳಿ ಜಿಲ್ಲೆಗಳಲ್ಲಿ ಜುಲೈ 9ರಿಂದ 11ರವರಗೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲು ಜುಲೈ 9ರಂದು, ಉತ್ತರ ಒಳನಾಡಿನ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.#ಮಳೆ #ಮುನ್ನೆಚ್ಚರಿಕೆ : #Extremely #Heavy #Rainfall (>204.5mm) #Warning for Coastal & Malnad #Karnataka #Red #Alert@KarnatakaVarthe #KSNDMC #KarnatakaRains #SouthwestMonsoon #Monsoon2026@DeputyCommissi8 @dcudupi @dcuttarakannada pic.twitter.com/G0s915OKmt— Karnataka State Natural Disaster Monitoring Centre (@KarnatakaSNDMC) July 6, 2026