ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.ಮಹಾರಾಷ್ಟ್ರದ ಕೊಂಕಣ ಪ್ರದೇಶ ಹಾಗೂ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಸಪ್ತ ನದಿಗಳಲ್ಲಿ ನೀರಿನ
ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.ಮಹಾರಾಷ್ಟ್ರದ ಕೊಂಕಣ ಪ್ರದೇಶ ಹಾಗೂ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಸಪ್ತ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದೆ.ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಭಾನುವಾರ ಮುಳುಗಡೆಯಾಗಿದ್ದ ಏಳು ಸೇತುವೆಗಳು ಸೋಮವಾರವೂ ಅದೇ ಸ್ಥಿತಿಯಲ್ಲಿವೆ. ಇದರೊಂದಿಗೆ ಗೋಕಾಕ–ಶಿಂಗಾಳಾಪುರ ಸೇತುವೆ ಮುಳುಗಿದ್ದು, ಜಲಾವೃತಗೊಂಡ ಸೇತುವೆಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಹಿಡಕಲ್ ಜಲಾಶಯ ಹಾಗೂ ನವಿಲುತೀರ್ಥ ಜಲಾಶಯಗಳಿಗೆ ಒಳಹರಿವಿನ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆಯಾಗಿದೆ.ಬೆಳಗಾವಿ ನಗರದಲ್ಲಿ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿಯಿಂದ ಸೋಮವಾರ ಸಂಜೆಯವರೆಗೆ ಏಳು ಮರ ಬಿದ್ದಿವೆ. ಕುವೆಂಪು ನಗರದ ಪ್ರೆಸ್ ಕಾಲೊನಿ ಹಾಗೂ ಭಾಗ್ಯ ನಗರದಲ್ಲಿ ಮರ ಬಿದ್ದು ಕಾರುಗಳು ಜಖಂಗೊಂಡಿವೆ. ಅದೃಷ್ಟವಷಾತ್ ಯಾವುದೇ ಅನಾಹುತವಾಗಿಲ್ಲ.ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ, ಮಲೆನಾಡಿನ ಶಿವಮೊಗ್ಗ, ಕರಾವಳಿಯ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಮುನ್ನೆಚ್ಚರಿಕೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.