PHOTOS: ವಯನಾಡ್ನಲ್ಲಿ ಭೂಕುಸಿತ; ಭರದಿಂದ ಸಾಗಿದ ರಕ್ಷಣಾ ಕಾರ್ಯ
ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಭೂಕುಸಿತ ಸಂಭವಿಸಿದೆ ಭೂಕುಸಿತದ ಪ್ರದೇಶದಲ್ಲಿ ಸಂಗ್ರಹವಾಗಿರುವ ಭಾರಿ ಪ್ರಮಾಣದ ಮಣ್ಣನ್ನು ತೆರವುಗೊಳಿ

ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಭೂಕುಸಿತ ಸಂಭವಿಸಿದೆ ಭೂಕುಸಿತದ ಪ್ರದೇಶದಲ್ಲಿ ಸಂಗ್ರಹವಾಗಿರುವ ಭಾರಿ ಪ್ರಮಾಣದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆಅವಘಡದಲ್ಲಿ ಏಳು ಮಂದಿ ಗಾಯಗೊಂಡಿದ್ದು ಇನ್ನೂ ಏಳು ಜನರು ನಾಪತ್ತೆಯಾಗಿದ್ದಾರೆಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ನಾಪತ್ತೆಯಾದವರ ಹುಡುಕಾಟ ನಡೆಸಲಾಗುತ್ತಿದೆಹವಾಮಾನ ಮುನ್ಸೂಚನೆ ಅಥವಾ ಎಚ್ಚರಿಕೆ ನೀಡದಿರುವುದು ಭೂಕುಸಿತಕ್ಕೆ ಕಾರಣವಲ್ಲ. ಬದಲಿಗೆ ಅಧಿಕಾರಿಗಳು ಸೂಚಿಸಿದಂತೆ ಸಮಯಕ್ಕೆ ಸರಿಯಾಗಿ ಮಣ್ಣನ್ನು ತೆರವುಗೊಳಿಸದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆರಕ್ಷಣಾ ಪಡೆ, ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯನ್ನು ಈಗಾಗಲೇ ಸ್ಥಳದಲ್ಲಿ ನಿಯೋಜಿಸಲಾಗಿದೆ.ಘಟನೆಗೂ ಮುನ್ನ ಆ ಪ್ರದೇಶದಲ್ಲಿ ಭಾರಿ ಮಳೆಯಾದ ಪರಿಣಾಮ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆನೆಲಕ್ಕುರುಳಿದ ಭಾರಿ ಮರಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆಭೂಕುಸಿತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ