ಎನ್ಆರ್ಐ ಇಲಾಖೆ ಬಗ್ಗೆ ಚರ್ಚಿಸಿ ತೀರ್ಮಾನ: ಸಚಿವ ಎಂ.ಬಿ. ಪಾಟೀಲ
ಬೆಂಗಳೂರು: ‘ಜಾಗತಿಕ ಹೂಡಿಕೆ ಎಂಬುದು ಬೃಹತ್ ಕೈಗಾರಿಕೆ ಇಲಾಖೆಯ ವ್ಯಾಪ್ತಿಯ ಒಳಗೇ ಇದೆ. ಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಉಪ ಸಮಿತಿ ರಚಿಸಲಾಗಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.ಜುಲೈ 2ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ‘ಜಾಗತಿಕ ಹೂಡಿಕೆ ಹಾಗೂ ವಿದೇಶಾಂಗ ವ್ಯವಹಾರಗಳ
ಬೆಂಗಳೂರು: ‘ಜಾಗತಿಕ ಹೂಡಿಕೆ ಎಂಬುದು ಬೃಹತ್ ಕೈಗಾರಿಕೆ ಇಲಾಖೆಯ ವ್ಯಾಪ್ತಿಯ ಒಳಗೇ ಇದೆ. ಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಉಪ ಸಮಿತಿ ರಚಿಸಲಾಗಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.ಜುಲೈ 2ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ‘ಜಾಗತಿಕ ಹೂಡಿಕೆ ಹಾಗೂ ವಿದೇಶಾಂಗ ವ್ಯವಹಾರಗಳ ಇಲಾಖೆ’ ರಚಿಸುವ ಕುರಿತು ಚರ್ಚೆ ನಡೆದಿತ್ತು.ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಹೂಡಿಕೆ ಎಂಬುದು ಬಂದಾಗ ಡೂಪ್ಲಿಕೇಷನ್ ಆಗುತ್ತದೆ. ಈಗಾಗಲೇ ಹೂಡಿಕೆಗೆ ಸಂಬಂಧಿಸಿದಂತೆ ಇಲಾಖೆ ವ್ಯಾಪ್ತಿಯಲ್ಲಿ ಸಮಿತಿಗಳು ಇವೆ. ಇನ್ವೆಸ್ಟ್ ಕರ್ನಾಟಕ ಫೋರಂ, ಹೂಡಿಕೆದಾರರಿಗೆ ರಿಯಾಯಿತಿಗಳನ್ನು ನೀಡಲು ಉನ್ನತ ಮಟ್ಟದ ಸಮಿತಿ ಇದೆ. ಹೀಗಿರುವಾಗ ಮತ್ತೊಂದು ಇಲಾಖೆಯಲ್ಲಿ ಹೂಡಿಕೆ ಎಂಬುದು ಬಂದಾಗ, ಒಂದರ ಮೇಲೊಂದು ಆಗುತ್ತದೆ’ ಎಂದರು.‘ಅನಿವಾಸಿ ಭಾರತೀಯರ ಕ್ಷೇಮಾಭಿವೃದ್ಧಿ, ಪ್ರತಿಭೆ ಅನ್ವೇಷಣೆಗೆ ನಮ್ಮ ತಕರಾರು ಇಲ್ಲ. ಸಚಿವ ಸಂಪುಟ ಸಭೆಗೆ ವಿಷಯ ಬರುವ ಮೊದಲು ಜಾಗತಿಕ ಹೂಡಿಕೆ ಎಂಬ ಪ್ರಸ್ತಾಪ ಇರಲಿಲ್ಲ. ಬದಲಿಗೆ ಜಾಗತಿಕ ವ್ಯವಹಾರ ಎಂದು ಇತ್ತು. ಸಂಪುಟ ಸಭೆಗೆ ಹೂಡಿಕೆ ಎಂದು ಬಂದಿತ್ತು. ಹೀಗಾಗಿ ಗೊಂದಲ ಉಂಟಾಗಿದೆ. ಈ ವಿಷಯವನ್ನು ಸಮಿತಿ ಸಭೆಯಲ್ಲಿ ಚರ್ಚಿಸಿ ಗೊಂದಲ ಬಗೆಹರಿಸಿಕೊಳ್ಳಲಾಗುವುದು’ ಎಂದರು.ರಾಜಕಾರಣ ಮಾಡಿದರೆ ಹೇಗೆ?: ‘ಜಲಾಶಯಗಳ ನೀರು ನಂಬಿಕೊಂಡು ಬೆಳೆ ಹಾಕಬೇಡಿ’ ಎಂಬ ಮುಖ್ಯಮಂತ್ರಿಯವರ ಹೇಳಿಕೆ ಬಗ್ಗೆ ಬಿಜೆಪಿ ಟೀಕಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಕುಡಿಯುವ ನೀರು ಮನುಷ್ಯರಿಗೆ ಹಾಗೂ ಜಾನುವಾರುಗಳಿಗೆ ತುರ್ತು ಅಗತ್ಯ. ಜಲಾಶಯದಲ್ಲಿ ನೀರಿಲ್ಲದೆ ಇದ್ದಾಗ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಅದರಲ್ಲೂ ರಾಜಕಾರಣ ಮಾಡಿದರೆ ಹೇಗೆ’ ಎಂದು ಪ್ರಶ್ನಿಸಿದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260707-4-1370516629