ಪಠ್ಯೇತರ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ - ಶಾಸಕ ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.ನಗರದ ಹೊರವಲಯದಲ್ಲಿರುವ ಮಲ್ಲಯ್ಯನಪುರ ಸರ್ಕಾರಿ ಆದರ್ಶ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡಾಚಟುವಟಿ

ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.ನಗರದ ಹೊರವಲಯದಲ್ಲಿರುವ ಮಲ್ಲಯ್ಯನಪುರ ಸರ್ಕಾರಿ ಆದರ್ಶ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡಾಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕರು, ಶಿಕ್ಷಣ ಪ್ರಬಲ ಅಸ್ತ್ರವಾಗಿದ್ದು ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ಅರಿಯಬೇಕು.ವಿದ್ಯಾರ್ಥಿ ದಿಸೆಯಲ್ಲೇ ಭವಿಷ್ಯದ ಗುರಿ ಹಾಕಿಕೊಂಡು ಸಾಕಾರಕ್ಕೆ ಶಕ್ತಿಮೀರಿ ಪ್ರಯತ್ನಿಸಬೇಕು, ಶಿಕ್ಷಣದ ಜೊತೆಗೆ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿಯಂತಹ ವಿಭಿನ್ನ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.ಆಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣ ಪಡೆಯುವುದರ ಜೊತೆಗೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು, ಮೊಬೈಲ್ ಗೀಳಿನಿಂದ ದೂರವಿರವಿರಬೇಕು ಎಂದು ಸಲಹೆ ನೀಡಿದರು.ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಾಲೆಯ ಸುತ್ತಲೂ ಸುತ್ತುಗೋಡೆ, ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸಿಕೊಡುವಂತೆ ಶಾಲೆಯ ಉಪನ್ಯಾಸಕರು ಶಾಸಕರಿಗೆ ಮನವಿ ಮಾಡಿದರು.ಎಸ್ಡಿಎಂಸಿ ಸದಸ್ಯ ಸೋಮಣ್ಣ, ಉಡಿಗಾಲ ಮಹದೇವ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಪುಟ್ಟಗೌರಮ್ಮ, ಮುಖ್ಯ ಶಿಕ್ಷಕ ತ್ಯಾಗರಾಜ್ ಮೂರ್ತಿ, ಪ್ರಾಂಶುಪಾಲ ನಿಂಗಯ್ಯ, ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260707-37-683576669