ಚಿಕ್ಕಮಗಳೂರು | ಮಲೆನಾಡು ಭಾಗದಲ್ಲಿ ಭಾರೀ ಮಳೆ – 4 ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ 4 ತಾಲೂಕುಗಳಲ್ಲಿನ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ ತಾಲೂಕುಗಳಲ್ಲಿನ ಶಾಲೆ, ಅಂಗನವಾಡಿಗಳಿಗೆ ರಜೆ (Schools Holiday) ಘೋಷಿಸಿ ಆಯಾ ತಾಲೂಕು ಆಡಳಿತ ಆದೇಶಿಸಿವೆ. ಇದನ್ನೂ ಓದಿ:

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ 4 ತಾಲೂಕುಗಳಲ್ಲಿನ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ ತಾಲೂಕುಗಳಲ್ಲಿನ ಶಾಲೆ, ಅಂಗನವಾಡಿಗಳಿಗೆ ರಜೆ (Schools Holiday) ಘೋಷಿಸಿ ಆಯಾ ತಾಲೂಕು ಆಡಳಿತ ಆದೇಶಿಸಿವೆ. ಇದನ್ನೂ ಓದಿ: ಬೆಂಗಳೂರಿನ 750 ಸಿಗ್ನಲ್ಗಳಲ್ಲಿ ರಸ್ತೆ ಸರಿಪಡಿಸಿ – ಜಿಬಿಎಗೆ ಬೆಂಗಳೂರು ಸಂಚಾರಿ ಪೊಲೀಸರ ಪತ್ರ ನಿನ್ನೆಯಿಂದಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆ, ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಅವತಿ, ವಸ್ತಾರೆ, ಆಲ್ದೂರು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆಯಾ ತಾಲೂಕು ಆಡಳಿತದಿಂದ ಇಂದು ಒಂದು ದಿನ ಮಾತ್ರ ರಜೆ ಘೋಷಣೆ ಮಾಡಿವೆ. ಮಳೆಗಿಂತ ಗಾಳಿಯ ವೇಗ ಹೆಚ್ಚಿದ್ದು ಗ್ರಾಮೀಣ ಭಾಗದಲ್ಲಿ ಅನಾಹುತ ಸಾಧ್ಯತೆ ಹಿನ್ನೆಲೆ ರಜೆ ಘೋಷಿಸಲಾಗಿದೆ. ಮಳೆ ಮುಂದುವರಿದರೆ ರಜೆ ಮುಂದುವರಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಭೀಕರ ಅಪಘಾತ – ಚಾಲಕ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವು