ಮಲೆನಾಡಲ್ಲಿ ಮಳೆಯಬ್ಬರ – ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ (Jog Falls) ಜೀವಕಳೆ ಪಡೆದುಕೊಂಡಿದೆ. ಕಳೆದ 4 ದಿನದಿಂದ ಶಿವಮೊಗ್ಗದಲ್ಲಿ (Shivamogga) ವ್ಯಾಪಕವಾಗಿ ಮಳೆಯಾಗುತ್ತಿದೆ. ಇದರ ಜೊತೆಗೆ ಶರಾವತಿ ಕಣಿವೆ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ (Jog Falls) ಜೀವಕಳೆ ಪಡೆದುಕೊಂಡಿದೆ. ಕಳೆದ 4 ದಿನದಿಂದ ಶಿವಮೊಗ್ಗದಲ್ಲಿ (Shivamogga) ವ್ಯಾಪಕವಾಗಿ ಮಳೆಯಾಗುತ್ತಿದೆ. ಇದರ ಜೊತೆಗೆ ಶರಾವತಿ ಕಣಿವೆ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ – ರಾಜ್ಯಕ್ಕೆ 1 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ದಾಖಲು ರಾಜ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿಯೂ ನೀರು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ. ಜೋಗ ಜಲಪಾತದ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದಾರೆ.
Read the complete story at Public TV Kannada