ಲಿಂಗಸುಗೂರು ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಗೆ 4 ಕುರಿ ಬಲಿ
ಲಿಂಗಸುಗೂರು: ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಕುರಿಗಳ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ನಾಲ್ಕು ಕುರಿಗಳು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಗೊರೇಬಾಳ ಗ್ರಾಮದ ಹನುಮಂತ ಅವರಿಗೆ ಸೇರಿದ ಕುರಿಗಳು ನಾಯಿಗಳ ದಾಳಿಗೆ ಬಲಿಯಾಗಿವೆ. ಕುರಿಗಳನ್ನು ಮೇಯಿಸುತ್ತಿರುವಾಗ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ₹18 ಸಾವಿರ ಬೆಲೆಬಾಳುವ ಮೂರು ಕುರಿಗಳು ಮತ್ತು ಒಂದ

ಲಿಂಗಸುಗೂರು: ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಕುರಿಗಳ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ನಾಲ್ಕು ಕುರಿಗಳು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಗೊರೇಬಾಳ ಗ್ರಾಮದ ಹನುಮಂತ ಅವರಿಗೆ ಸೇರಿದ ಕುರಿಗಳು ನಾಯಿಗಳ ದಾಳಿಗೆ ಬಲಿಯಾಗಿವೆ. ಕುರಿಗಳನ್ನು ಮೇಯಿಸುತ್ತಿರುವಾಗ ಬೀದಿ ನಾಯಿಗಳು ದಾಳಿ ಮಾಡಿದ್ದರಿಂದ ₹18 ಸಾವಿರ ಬೆಲೆಬಾಳುವ ಮೂರು ಕುರಿಗಳು ಮತ್ತು ಒಂದು ಕುರಿಮರಿ ಮೃತಪಟ್ಟಿವೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿ ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಬೇರೆಡೆಗೆ ಸಾಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260707-32-1170854374
Read the complete story at Prajavani