ಹೊನ್ನಾಳಿ ಬೇಡ ಜಂಗಮ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ ಜುಲೈ 12ರಂದು
ಹೊನ್ನಾಳಿ: ‘ಬೇಡ ಜಂಗಮ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 12ರಂದು ಬೆಳಿಗ್ಗೆ 10 ಗಂಟೆಗೆ ಹಿರೇಕಲ್ಮಠದ ಸಮುದಾಯ ಭವನದಲ್ಲಿ ನಡೆಯಲಿದೆ’ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಬೈರನಹಳ್ಳಿ ಎಂ. ಪಂಚಾಕ್ಷರಯ್ಯ ಹೇಳಿದರು.ಹಿರೇಕಲ್ಮಠದಲ್ಲಿ ಭಾನುವಾರ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅವರಿಂದ ಕಾರ್ಯಕ್ರಮದ ಆಹ್ವಾನ

ಹೊನ್ನಾಳಿ: ‘ಬೇಡ ಜಂಗಮ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 12ರಂದು ಬೆಳಿಗ್ಗೆ 10 ಗಂಟೆಗೆ ಹಿರೇಕಲ್ಮಠದ ಸಮುದಾಯ ಭವನದಲ್ಲಿ ನಡೆಯಲಿದೆ’ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಬೈರನಹಳ್ಳಿ ಎಂ. ಪಂಚಾಕ್ಷರಯ್ಯ ಹೇಳಿದರು.ಹಿರೇಕಲ್ಮಠದಲ್ಲಿ ಭಾನುವಾರ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅವರಿಂದ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.‘ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಗೋವಿನಕೋವಿ ಹಾಲ ಸ್ವಾಮೀಜಿ ಮಠದ ಸದ್ಗುರು ಶಿವಯೋಗಿ ವಿಶ್ವಾರಾಧ್ಯ ಮಹಾಲಿಂಗ ಹಾಲ ಸ್ವಾಮೀಜಿ, ರಾಂಪುರ ಮಠದ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು’ ಎಂದರು.‘ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ ಕಾರ್ಡ್ ಸಹಿತ ಸಂಪೂರ್ಣ ಮಾಹಿತಿಯೊಂದಿಗೆ ಜುಲೈ 7ರೊಳಗೆ 9731396571, 9731331855, 9916061606, 6363834440, 9980170900ಗೆ ಸಂಪರ್ಕಿಸುವಂತೆ’ ರುದ್ರಸ್ವಾಮಿ ಎಸ್. ಕುಳಗಟ್ಟೆ ಮನವಿ ಮಾಡಿದರು.ಎಂ.ರುದ್ರಯ್ಯ, ಎಂ.ಎಸ್.ಶಾಸ್ತ್ರೀ ಹೊಳೆಮಠ್, ಹನುಮನಹಳ್ಳಿ ಲೋಕೇಶಯ್ಯ, ಜಗನ್ನಾಥಸ್ವಾಮಿ, ಸಾಲಿಮಠ್, ಬೆನಕನಹಳ್ಳಿ ಬಸಯ್ಯ, ಕೊಟ್ರಯ್ಯ, ಹಾಲಸ್ವಾಮಿ, ಮಲ್ಲಿಕಾರ್ಜುನಯ್ಯ, ದಯಾನಂದಯ್ಯ, ಹೇಮಲತಾ ಹಾಜರಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260707-43-552411258