ವಯನಾಡ್ನ ಮೇಪ್ಪಾಡಿ ಸಮೀಪ ಭೂಕುಸಿತ: ಹಲವು ಮಂದಿ ಸಿಲುಕಿರುವ ಶಂಕೆ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.ವಯನಾಡ್: ಮತ್ತೆ 7 ವಿದ್ಯಾರ್ಥಿಗಳಲ್ಲಿ ಶಿಗೆಲ್ಲಾ ಸೋಂಕು ದೃಢವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.ವಯನಾಡ್: ಮತ್ತೆ 7 ವಿದ್ಯಾರ್ಥಿಗಳಲ್ಲಿ ಶಿಗೆಲ್ಲಾ ಸೋಂಕು ದೃಢವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ.ಕಲ್ಪೆಟ್ಟಾದಿಂದ ಅಗ್ನಿ ಶಾಮಕದ ದಳವು ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡಿದೆ.ಸುರಂಗ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಅ ಪ್ರದೇಶದಲ್ಲಿಯೇ ತಾತ್ಕಾಲಿಕ ಕ್ಯಾಂಪ್ಗಳಲ್ಲಿ ತಂಗುತ್ತಿದ್ದರು. ಘಟನಾ ಸ್ಥಳದಿಂದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.ವಯನಾಡ್: 150ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಈ ಪರಿಸರದಲ್ಲಿ ಕೆಲವು ಮನೆಗಳು ಹಾಗೂ ಹೋಂ ಸ್ಟೇಗಳಿವೆ ಎಂದು ಅವರು ತಿಳಿಸಿದ್ದಾರೆ. ಕಾರ್ಮಿಕರ ಕೆಲವು ವಾಹನಗಳು ಘಟನೆಯಲ್ಲಿ ಹಾನಿಗೀಡಾಗಿವೆ.ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಆರ್ಎಫ್) ಸಿಬ್ಬಂದಿಯನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ.ಸಚಿವ ಟಿ. ಸಿದ್ದೀಕ್ ಹಾಗೂ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸಮನ್ವಯ ಸಾಧಿಸುವ ಕೆಲಸ ಮಾಡುತ್ತಿದ್ದು, ಹೆಚ್ಚಿನ ಮಂದಿ ಸಿಲುಕಿಕೊಂಡಿದ್ದಾರೆಯೇ ಎನ್ನುವುದನ್ನು ಪರಿಶೀಲಿಸುತ್ತಿದ್ದಾರೆ.ಜಮ್ಮು: ಹಲವೆಡೆ ಭೂಕುಸಿತ; ಜನ ಜೀವನ ಅಸ್ತವ್ಯಸ್ತ