ಯು.ಬಿ.ಶೆಟ್ಟಿ ಸಂಸ್ಥೆಯಲ್ಲಿ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಉದ್ಘಾಟನೆ
ಬೈಂದೂರು: ಇಲ್ಲಿನ ಯು.ಬಿ.ಶೆಟ್ಟಿ ಶಿಕ್ಷಣ ಸಂಸ್ಥೆಯಲ್ಲಿ ಅತ್ಯಾಧುನಿಕ ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್ ಹಾಗೂ ಸುಸಜ್ಜಿತ ಗ್ರಂಥಾಲಯದ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು.ಸಂಸ್ಥೆಯ ಅಧ್ಯಕ್ಷ ಯು.ಬಿ.ಶೆಟ್ಟಿ ನೂತನ ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಎಲ್ಲಾ ಶೈಕ್ಷಣಿಕ ಸೌಲಭ್ಯಗಳು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಸಂಸ್ಥ

ಬೈಂದೂರು: ಇಲ್ಲಿನ ಯು.ಬಿ.ಶೆಟ್ಟಿ ಶಿಕ್ಷಣ ಸಂಸ್ಥೆಯಲ್ಲಿ ಅತ್ಯಾಧುನಿಕ ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್ ಹಾಗೂ ಸುಸಜ್ಜಿತ ಗ್ರಂಥಾಲಯದ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು.ಸಂಸ್ಥೆಯ ಅಧ್ಯಕ್ಷ ಯು.ಬಿ.ಶೆಟ್ಟಿ ನೂತನ ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಎಲ್ಲಾ ಶೈಕ್ಷಣಿಕ ಸೌಲಭ್ಯಗಳು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಸಂಸ್ಥೆಯಲ್ಲಿ ಆಧುನಿಕ ಪ್ರಯೋಗಾಲಯ ಹಾಗೂ ಗ್ರಂಥಾಲಯವನ್ನು ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು ತಂತ್ರಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಜ್ಞಾನವನ್ನು ಪಡೆದು ಉನ್ನತ ಶಿಕ್ಷಣದತ್ತ ಸಾಗಲು ಈ ಸೌಲಭ್ಯಗಳು ಸಹಕಾರಿಯಾಗಲಿವೆ ಎಂದರು.ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಪುಟ್ಟ ಮಕ್ಕಳಿಗೆ ಶೌಚಾಲಯಕ್ಕೆ ಸುರಕ್ಷಿತವಾಗಿ ಹಾಗೂ ಸುಲಭವಾಗಿ ತೆರಳಲು ಏರೋ ಬ್ರಿಜ್ ಮಾದರಿಯ ಸಂಪರ್ಕ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಎಲ್ಕೆಜಿ ಯಿಂದ ಪದವೀಧರ ಶಿಕ್ಷಣದವರೆಗೆ ಒಂದೇ ಶಿಕ್ಷಣ ಸಂಸ್ಥೆಯ ಅಡಿ ಲಿ ಶಿಕ್ಷಣವನ್ನು ಒದಗಿಸುವ ಮಹತ್ತರ ಕನಸಿನೊಂದಿಗೆ ಸಂಸ್ಥೆ ದೃಢ ಹೆಜ್ಜೆ ಇಡುತ್ತಿದೆ ಎಂದರು.ಸಂಸ್ಥೆಯ ಕಾರ್ಯದರ್ಶಿ ಯಶಶ್ರೀ ಬಿ.ಶೆಟ್ಟಿ, ಪ್ರಾಂಶುಪಾಲೆ ಅಮಿತಾ ಶೆಟ್ಟಿ, ಶಿಕ್ಷಕರು ಉಪಸ್ಥಿತರಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260707-28-1891812981