ವಸತಿ ನಿಲಯಕ್ಕೆ ಅರ್ಜಿ ಆಹ್ವಾನ, ಜುಲೈ 20ರೊಳಗೆ ಸಲ್ಲಿಕೆಗೆ ಅವಕಾಶ
ಕಲಬುರಗಿ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ (ಸಾಮಾನ್ಯ ಪದವಿ ಕೋರ್ಸಿನ) ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಸೇಡಂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.ಪ್ರವೇಶ ಬಯಸುವ ವಿದ್ಯಾರ್ಥಿಗಳು https://shp.karnataka.gov.in/bc

ಕಲಬುರಗಿ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ (ಸಾಮಾನ್ಯ ಪದವಿ ಕೋರ್ಸಿನ) ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಸೇಡಂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.ಪ್ರವೇಶ ಬಯಸುವ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಜುಲೈ 20ರೊಳಗಾಗಿ ಅರ್ಜಿ ಸಲ್ಲಿಸಿ, ದಾಖಲಾತಿಗಳನ್ನು ಸೇಡಂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು.ಮಾಹಿತಿಗಾಗಿ ಇಲಾಖೆಯ https://bcwd.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದರೆ bcwdhelpline@gmail.com ಇ–ಮೇಲ್ ಮೂಲಕ ಅಥವಾ ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260708-31-252029823