ದೆಹಲಿಯ ರೋಹಿಣಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ – ಹಲವರು ಸಿಲುಕಿರುವ ಶಂಕೆ
– ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ನವದೆಹಲಿ: ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೆಹಲಿಯ (Delhi) ರೋಹಿಣಿ ಸೆಕ್ಟರ್ 16ರಲ್ಲಿ (Rohini Sector 16) ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಇಂದು (ಜು.8) ಸಂಜೆ 4:20ರ ಸುಮಾರಿಗೆ ಮಾಹಿತಿ ತಿಳಿಯುತ್ತಿದ್ದಂತೆ ನಾಲ್ಕು ಅಗ್ನಿಶ

– ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ನವದೆಹಲಿ: ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೆಹಲಿಯ (Delhi) ರೋಹಿಣಿ ಸೆಕ್ಟರ್ 16ರಲ್ಲಿ (Rohini Sector 16) ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಇಂದು (ಜು.8) ಸಂಜೆ 4:20ರ ಸುಮಾರಿಗೆ ಮಾಹಿತಿ ತಿಳಿಯುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯುವ ಹಾಗೂ ಸ್ಥಳಾಂತರಿಸುವ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಅಯೋಧ್ಯೆ, ಬದರಿನಾಥ ಬಳಿಕ ಬಾಗಲಾಮುಖಿ ದೇವಾಲಯದಲ್ಲೂ ಕಾಣಿಕೆ ದುರ್ಬಳಕೆ ಆರೋಪ ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹಲವಾರು ಜನರನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದಾರೆ. ಆದರೆ ಎಷ್ಟು ಜನ ಸಿಲುಕಿಕೊಂಡಿದ್ದಾರೆ ಹಾಗೂ ಎಷ್ಟು ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Read the complete story at Public TV Kannada