ಸಂಜು ಸ್ಯಾಮ್ಸನ್ರನ್ನು ತಂಡದಿಂದ ಕೈಬಿಟ್ಟಿದ್ದೇಕೆ? ಕೊನೆಗೂ ಮೌನ ಮುರಿದ ಗಂಭೀರ್
ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಮೂರನೇ ಟಿ20 ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 125 ರನ್ಗಳ ಹೀನಾಯ ಸೋಲು ಅನುಭವಿಸಿದೆ. ಆ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 0–2ರಿಂದ ಹಿನ್ನಡೆ ಅನುಭವಿಸುತ್ತಿದೆ.ಈ ಸೋಲಿನ ಜೊತೆಗೆ, ಕಳೆದ ಟಿ20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿ ವಿಶ್ವಕಪ್ ಗೆಲುವಿಗೆ ಕಾರಣವಾಗಿದ್ದ ಸಂಜು ಸ್ಯಾಮ್ಸನ್ ಅವರನ

ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಮೂರನೇ ಟಿ20 ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 125 ರನ್ಗಳ ಹೀನಾಯ ಸೋಲು ಅನುಭವಿಸಿದೆ. ಆ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 0–2ರಿಂದ ಹಿನ್ನಡೆ ಅನುಭವಿಸುತ್ತಿದೆ.ಈ ಸೋಲಿನ ಜೊತೆಗೆ, ಕಳೆದ ಟಿ20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿ ವಿಶ್ವಕಪ್ ಗೆಲುವಿಗೆ ಕಾರಣವಾಗಿದ್ದ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಟ್ಟಿರುವುದಕ್ಕೆ ಕ್ರಿಕೆಟ್ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಮಾತನಾಡಿದ ಭಾರತ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್, ಸ್ಯಾಮ್ಸನ್ ಅವರನ್ನು ತಂಡದಿಂದ ಹೊರಗಿಟ್ಟಿರುವುದರ ಬಗ್ಗೆ ಅವರಿಗೆ ಸ್ಪಷ್ಟನೆ ನೀಡಲಾಗಿದೆ. ನಮ್ಮಿಬ್ಬರ ನಡುವಿನ ಮಾತುಕತೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.ಐರ್ಲೆಂಡ್ ವಿರುದ್ಧದ ಎರಡು ಟಿ20 ಪಂದ್ಯಗಳಲ್ಲಿ ಹಾಗೂ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರನ್ ಗಳಿಸಲು ಪರದಾಡಿದ್ದ ಸಂಜು ಸ್ಯಾಮ್ಸನ್ ಅವರನ್ನು ಆಡುವ 11ರ ಬಳಗದಿಂದ ಕೈಬಿಟ್ಟು ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರಿಗೆ ಮಣೆ ಹಾಕಲಾಯಿತು. ಸೂರ್ಯವಂಶಿ ಎರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶನ ನೀಡಿಲ್ಲ. ಆದರೆ, ಸಂಜು ಸ್ಯಾಮ್ಸನ್ ಅವರಿಗೆ ತಂಡದಿಂದ ಹೊರಗಿಟ್ಟಿರುವುದರ ಕುರಿತು ಅವರಿಗೆ ಸ್ಪಷ್ಟನೆ ನೀಡಿರುವುದಾಗಿ ಗಂಭೀರ್ ಹೇಳಿದ್ದಾರೆ.‘ಸಂಜು ಸ್ಯಾಮ್ಸನ್ ಅವರಿಗೆ ಅಗತ್ಯವಿರುವ ಸ್ಪಷ್ಟತೆಯನ್ನು ನಾನು ನೀಡಿದ್ದೇನೆ. ಅದು ಆಟಗಾರ ಮತ್ತು ಮುಖ್ಯ ತರಬೇತುದಾರರ ನಡುವಿನ ಸಂಭಾಷಣೆ. ಅದನ್ನು ಸಾರ್ವಜನಿಕವಾಗಿ ತಿಳಿಸಲು ಸಾಧ್ಯವಿಲ್ಲ’ ಎಂದು ಗಂಭೀರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‘ಸಂಜು ಕುರಿತು ನಾವು ತುಂಬಾ ಸ್ಪಷ್ಟವಾಗಿದ್ದೇವೆ. ಅವರು ಟಿ20 ವಿಶ್ವಕಪ್ನಲ್ಲಿ ಮಾಡಿದ ಕೆಲಸ ಅದ್ಭುತವಾಗಿತ್ತು. ಆದರೆ, ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಈಗಿನ ಫಾರ್ಮ್ ಕೂಡ ಮುಖ್ಯವಾಗುತ್ತದೆ. ಇದೇ ಸರಣಿಯಲ್ಲಿ ಅವರು ಮತ್ತೆ ತಂಡಕ್ಕೆ ಮರಳಬಹುದು’ ಎಂದು ಅವರು ಹೇಳಿದ್ದಾರೆ.‘ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಪಂದ್ಯ ಗೆಲ್ಲಲು ಯಾವ ಸಂಯೋಜನೆ ಜೊತೆ ಹೋಗಬೇಕು ಎಂಬುದನ್ನು ಯೋಚಿಸಿ ನಿರ್ಧಾರ ನಾವು ತೆಗೆದುಕೊಳ್ಳುತ್ತೇವೆ. ಇವರೇ ಇರಬೇಕು ಎಂಬ ನಿಯಮವಿಲ್ಲ. ನನ್ನ ಪ್ರಕಾರ ಪ್ರತಿಯೊಬ್ಬರೂ ಭಾರತ ತಂಡದ ಪರ ಆಡವಂತಾಗಬೇಕು’ ಎಂದಿದ್ದಾರೆ.