ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗಲಿ: ಶಾಸಕ ಆರ್.ವಿ.ದೇಶಪಾಂಡೆ
ಹಳಿಯಾಳ: ‘ಎಪಿಎಂಸಿ ಚುನಾವಣೆ ಬೇಗ ನಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗಬೇಕು, ಆ ನಿಟ್ಟಿನಲ್ಲಿ ಎಪಿಎಂಸಿ ಮುಖಾಂತರ ಮಾರಾಟ ಕೇಂದ್ರಗಳನ್ನು ಪ್ರಾರಂಭಿಸಿ ರೈತರಿಗೆ ಸಹಾಯ ಮಾಡುತ್ತಿದೆ’ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಈಚೆಗೆ ಎಪಿಎಂಸಿ ಅಭಿವೃದ್ಧಿ ಕಾ

ಹಳಿಯಾಳ: ‘ಎಪಿಎಂಸಿ ಚುನಾವಣೆ ಬೇಗ ನಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗಬೇಕು, ಆ ನಿಟ್ಟಿನಲ್ಲಿ ಎಪಿಎಂಸಿ ಮುಖಾಂತರ ಮಾರಾಟ ಕೇಂದ್ರಗಳನ್ನು ಪ್ರಾರಂಭಿಸಿ ರೈತರಿಗೆ ಸಹಾಯ ಮಾಡುತ್ತಿದೆ’ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಈಚೆಗೆ ಎಪಿಎಂಸಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ಫಲಾನುಭವಿಗಳಿಗೆ ಕಿಟ್ ವಿತರಿಸಿ ಅವರು ಮಾತನಾಡಿದರು.‘ಹಳಿಯಾಳ ತಾಲ್ಲೂಕಿನ ವಿವಿಧ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸುಮಾರು 565, ಪ್ರತಿ ಕಿಟ್ಗೆ ₹5000 ಮೌಲ್ಯದ ಸುರಕ್ಷತಾ ಸಾಮಗ್ರಿಗಳನ್ನು ನೀಡಲಾಗುತ್ತಿದೆ. ಇವುಗಳನ್ನು ಯೋಗ್ಯರೀತಿಯಲ್ಲಿ ಬಳಕೆ ಮಾಡಿಕೊಳ್ಳಿ, ಮಾರಾಟ ಮಾಡಬೇಡಿ’ ಎಂದು ಸಲಹೆ ನೀಡಿದರು.ಎಪಿಎಂಸಿಯಲ್ಲಿ ಸುಮಾರು ₹1.82 ಕೋಟಿಗೂ ಅಧಿಕ ವೆಚ್ಚದಿಂದ ಅಭಿವೃದ್ಧಿಪಡಿಸಲಾಗುತ್ತಿದೆ. ಆಡಳಿತ ಕಚೇರಿ, ಗೋಧಾಮು ಅಭಿವೃದ್ಧಿ, ಆವರಣದ ಗೋಡೆ ನಿರ್ಮಾಣ, ಪ್ರಾಗಂಣದಲ್ಲಿ 80 ಎಂಟಿ ಸಾಮರ್ಥ್ಯದ ತೂಕದ ಯಂತ್ರ ನಿರ್ಮಾಣ ಕಾಮಗಾರಿ ನಡೆಯಲಿದೆ ಎಂದರು.ಕಾರ್ಯದರ್ಶಿ ಸುಮಿತ್ರಾ ಎಸ್.ಹಾವಣ್ಣವರ ಪ್ರಸ್ತಾವಿಕ ಮಾತನಾಡಿದರು.ಕೃಷಿ ಇಲಾಖೆ ಆಡಳಿತಾಧಿಕಾರಿ ಶಿರಸಿಯ ಬಸವರಾಜ ಜಾಮನಾಳ, ತಹಶೀಲ್ದಾರ್ ಪಿರೋಜ್ ಷಾ ಸೋಮನಕಟ್ಟಿ, ಕಾರ್ಮಿಕ ಇಲಾಖೆಯ ನಿರೀಕ್ಷಕಿ ಲಕ್ಷ್ಮಿ ಲಾಯದ ಗುಂಡಿ ಮತಿತ್ತರ ಇಲಾಖಾ ಅಧಿಕಾರಿಗಳು ಇದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260708-20-1221953353