ಬರದಿಂದ ತತ್ತರಿಸಿದ ರೈತರ ಸಾಲಮನ್ನಾ ಮಾಡಬೇಕು: ಮುಖ್ಯಮಂತ್ರಿಗೆ ಮನವಿ
ಬೆಳಗಾವಿ: ‘ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಸಂಬಂಧ ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಶೀಘ್ರವೇ ಉನ್ನತಮಟ್ಟದ ಸಭೆ ಕರೆಯಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಗುರುವಾರ 40ಕ್ಕೂ ಅಧಿಕ ಕನ್ನಡ ಹೋರಾಟಗಾರರು ಸಿ.ಎಂ. ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರ
ಬೆಳಗಾವಿ: ‘ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಸಂಬಂಧ ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಶೀಘ್ರವೇ ಉನ್ನತಮಟ್ಟದ ಸಭೆ ಕರೆಯಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಗುರುವಾರ 40ಕ್ಕೂ ಅಧಿಕ ಕನ್ನಡ ಹೋರಾಟಗಾರರು ಸಿ.ಎಂ. ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.‘ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲೂ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚಿಸಬೇಕು. ಕರ್ನಾಟಕ ಪರ ನಿರ್ಣಯ ಅಂಗೀಕಾರಕ್ಕೆ ಹಿಂದೇಟು ಹಾಕುತ್ತಿರುವ ಬೆಳಗಾವಿ ಪಾಲಿಕೆಯನ್ನು ಸೂಪರ್ಸೀಡ್ ಮಾಡಬೇಕು’ ಎಂದು ಆಗ್ರಹಿಸಿದರು.ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ ಮತ್ತಿತರರು ಇದ್ದರು.ಬರದಿಂದ ತತ್ತರಿಸಿದ ರೈತರ ಸಾಲಮನ್ನಾ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಮುಖ್ಯಮಂತ್ರಿಗೆ ಮನವಿ ಕೊಟ್ಟರು. ಚೂನಪ್ಪ ಪೂಜೇರಿ ನೇತೃತ್ವ ವಹಿಸಿದ್ದರು.ರೈತರ ಸಾಲ ಮನ್ನಾ ಮಾಡಿ₹10 ಲಕ್ಷ ಪರಿಹಾರ ಕೊಡಿಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾದ 56 ನೇಕಾರರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದವರು ಮನವಿ ನೀಡಿದರು. ಶಿವಲಿಂಗ ಟಿರಕಿ ನೇತೃತ್ವ ವಹಿಸಿದ್ದರು.ಎಂಇಎಸ್ ನಿಷೇಧಕ್ಕೆ ಆಗ್ರಹಬೆಳಗಾವಿಯಲ್ಲಿ ನಾಡವಿರೋಧಿ ಚಟುವಟಿಕೆ ಕೈಗೊಳ್ಳುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಸಿ.ಎಂಗೆ ಮನವಿ ಸಲ್ಲಿಸಿದರು.‘ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮ ಶಿಕ್ಷಕರಿಗೆ ಕನ್ನಡ ಭಾಷೆಯಲ್ಲೇ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನಿಸಬೇಕು. ಇದಕ್ಕಾಗಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಚರ್ಚೆ ನಡೆಸಬೇಕು’ ಎಂದು ಆಗ್ರಹಿಸಿದರು. ದೀಪಕ ಗುಡಗನಟ್ಟಿ, ಸುರೇಶ ಗವನ್ನವರ ಇತರರಿದ್ದರು.