ಶಿಕ್ಷಕಿ ಬೈದರೆಂಬ ಆರೋಪ; ಮನನೊಂದು ನೇಣಿಗೆ ಶರಣಾದ 8ನೇ ತರಗತಿ ವಿದ್ಯಾರ್ಥಿನಿ
ಬೆಂಗಳೂರು: ಶಿಕ್ಷಕಿ ಬೈದರೆಂಬ ವಿಚಾರಕ್ಕೆ ಮನನೊಂದು 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ದುರ್ಘಟನೆ ನಡೆದಿದೆ. ಮಧುಶ್ರೀ ಮೃತ ವಿದ್ಯಾರ್ಥಿನಿ. ಆಕೆ ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ರಾತ್ರಿ ಮನೆಯಲ್ಲಿ ನೇಣು ಬಿಗಿದುಕ

ಬೆಂಗಳೂರು: ಶಿಕ್ಷಕಿ ಬೈದರೆಂಬ ವಿಚಾರಕ್ಕೆ ಮನನೊಂದು 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ದುರ್ಘಟನೆ ನಡೆದಿದೆ. ಮಧುಶ್ರೀ ಮೃತ ವಿದ್ಯಾರ್ಥಿನಿ. ಆಕೆ ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗ್ಗೆ ಪೋಷಕರು ಎದ್ದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ಡೆತ್ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ, ‘ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಅವಮಾನ ಸಹಿಸಿಕೊಂಡು ಬದುಕಲು ಆಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ’ ಎಂದು ವಿದ್ಯಾರ್ಥಿನಿ ಬರೆದಿದ್ದಾಳೆ.ಇದನ್ನೂ ಓದಿ: ಭಾರೀ ಮಳೆಗೆ ಕೋಝಿಕ್ಕೋಡ್ ರೈಲು ನಿಲ್ದಾಣದ 137 ವರ್ಷ ಹಳೆಯ ಗಡಿಯಾರ ಗೋಪುರ ಕುಸಿತ ‘ಅಮ್ಮ, ಅಕ್ಕ, ತಂಗಿ, ತಮ್ಮ ಯಾರದ್ದೂ ತಪ್ಪಿಲ್ಲ. ನನ್ನ ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿ ಮೇಲೆ ಬದುಕುವ ಅರ್ಹತೆ ಇಲ್ಲ’ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾಳೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್ನೋಟ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿದ್ಯಾರ್ಥಿನಿಯ ಸಾವಿನ ಕುರಿತು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಎಸ್ಐಆರ್ ಕಾರ್ಯಕ್ಕೆ ನೆಟ್ವರ್ಕ್ ಸಮಸ್ಯೆ – ಮೊಬೈಲ್ ಹಿಡಿದು ಬೆಟ್ಟ ಏರಿದ ಬಿಎಲ್ಒಗಳು