ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರು – ಮುಂದಿನ 3 ದಿನ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ
– ದಕ್ಷಿಣ ಒಳನಾಡು ಭಾಗದಲ್ಲಿ ಇನ್ನೂ 10 ದಿನ ಮಳೆ ಸಾಧ್ಯತೆ ಕಡಿಮೆ ಬೆಂಗಳೂರು: ಬರಗಾಲದಿಂದ ಬಸವಳಿದ್ದ ಕರ್ನಾಟಕದಲ್ಲಿ ಈಗ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿ (Karavali), ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲಭಾಗಗಳಲ್ಲಿ ಭಾರೀ ಮಳೆ (Heavy Rain) ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಹವ

– ದಕ್ಷಿಣ ಒಳನಾಡು ಭಾಗದಲ್ಲಿ ಇನ್ನೂ 10 ದಿನ ಮಳೆ ಸಾಧ್ಯತೆ ಕಡಿಮೆ ಬೆಂಗಳೂರು: ಬರಗಾಲದಿಂದ ಬಸವಳಿದ್ದ ಕರ್ನಾಟಕದಲ್ಲಿ ಈಗ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿ (Karavali), ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲಭಾಗಗಳಲ್ಲಿ ಭಾರೀ ಮಳೆ (Heavy Rain) ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ವಿಜ್ಞಾನಿ ಡಾ.ಲತಾ ಮಾಹಿತಿ ನೀಡಿದ್ದು, ಕರಾವಳಿ ಜಿಲ್ಲೆಗಳು, ಹಾಸನ, ಶಿವಮೊಗ್ಗ, ಮಡಿಕೇರಿ ಮತ್ತು ಬೆಳಗಾವಿ ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಈ ಭಾಗಗಳಿಗೆ ಇನ್ನೂ 2 ದಿನಗಳ ಕಾಲ ಯಲ್ಲೋ ಅಲಟ್೯ (Yellow Alert) ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಮುಂಗಾರು ಅಬ್ಬರ – ಹಿರಿಯಡ್ಕ ಬಳಿಯ ಬಜೆ ಡ್ಯಾಂ ಭರ್ತಿ 3 ದಿನಗಳ ಬಳಿಕ ಈ ಭಾಗಗಳಲ್ಲಿ ಹಂತ-ಹಂತವಾಗಿ ಮಳೆ ಕಡಿಮೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ರಾಯಚೂರು, ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಇನ್ನೂ 10 ದಿನಗಳ ವರೆಗೂ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ. ಈ ಭಾಗಗಳಲ್ಲಿ ಮಳೆ ಸಾಧ್ಯತೆ ಕಡಿಮೆ, ಮಳೆ ಬಂದರೂ ಕೂಡ ಮಳೆಯ ಪ್ರಮಾಣ ತೀರಾ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಕೊಡಗಿನಲ್ಲಿ ಬಿರುಸು ಪಡೆದ ಮಳೆ – ಒಂದೇ ದಿನ ಹಾರಂಗಿ ಜಲಾಶಯಕ್ಕೆ ಹರಿದು ಬಂತು 1.5 ಟಿಎಂಸಿ ನೀರು