ಎಲ್ಲೆಲ್ಲೂ ‘ತಬಾಹಿ’ ಅಬ್ಬರ: ಯೋಗರಾಜ್ ಭಟ್ ಸಾಹಿತ್ಯಕ್ಕೆ ಮನಸೋತ ಸಿನಿ ಪ್ರಿಯರು
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ವಿಡಿಯೊ ಹಾಡು ಜುಲೈ 8ರಂದು ಬಿಡುಗಡೆಯಾಗಿತ್ತು. ಬಿಡುಗಡೆಯಾದ ಒಂದೇ ದಿನದಲ್ಲಿ ತಬಾಹಿ ವಿಡಿಯೊ ಹಾಡು 1.8 ಕೋಟಿ ವೀಕ್ಷಣೆ ಪಡೆದುಕೊಂಡಿದೆ.ಸಾಮಾಜಿಕ ಜಾಲತಾಣದಲ್ಲಿ ‘ಟಾಕ್ಸಿಕ್’ ಚಿತ್ರದ ತಬಾಹಿ ಹಾಡು ಎಲ್ಲರ ಗಮನ ಸೆಳೆದಿದೆ. ಅಸಾಧಾರಣ ಹಾಡು, ಅದ್ಭುತ ಪ್ರಸ್ತುತಿ ಎಂದು ಅಭಿಮಾನಿಗಳು ಸಾಹಿತ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ವಿಡಿಯೊ ಹಾಡು ಜುಲೈ 8ರಂದು ಬಿಡುಗಡೆಯಾಗಿತ್ತು. ಬಿಡುಗಡೆಯಾದ ಒಂದೇ ದಿನದಲ್ಲಿ ತಬಾಹಿ ವಿಡಿಯೊ ಹಾಡು 1.8 ಕೋಟಿ ವೀಕ್ಷಣೆ ಪಡೆದುಕೊಂಡಿದೆ.ಸಾಮಾಜಿಕ ಜಾಲತಾಣದಲ್ಲಿ ‘ಟಾಕ್ಸಿಕ್’ ಚಿತ್ರದ ತಬಾಹಿ ಹಾಡು ಎಲ್ಲರ ಗಮನ ಸೆಳೆದಿದೆ. ಅಸಾಧಾರಣ ಹಾಡು, ಅದ್ಭುತ ಪ್ರಸ್ತುತಿ ಎಂದು ಅಭಿಮಾನಿಗಳು ಸಾಹಿತ್ಯದ ಕುರಿತು ಹಾಡಿ ಹೊಗಳುತ್ತಿದ್ದಾರೆ. ವಿಶೇಷ ಏನೆಂದರೆ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡಿಗೆ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ವಿಶಾಲ್ ಮಿಶ್ರಾ ಸಂಗೀತ ಸಂಯೋಜನೆಯಲ್ಲಿ ತಬಾಹಿ ಹಾಡು ಬಿಡುಗಡೆಯಾಗಿ ಎಲ್ಲರ ಮೆಚ್ಚಗೆಗೆ ಪಾತ್ರವಾಗಿದೆ. ಬೋಲ್ಡ್ ಲುಕ್ನಲ್ಲಿ ಯಶ್, ಕಿಯಾರಾ: ಟಾಕ್ಸಿಕ್ ಚಿತ್ರದ ‘ತಬಾಹಿ’ ವಿಡಿಯೊ ಬಿಡುಗಡೆಪ್ರೇಕ್ಷಕರ ಗಮನ ಸೆಳೆದ ಟಾಕ್ಸಿಕ್ ‘ತಬಾಹಿ’ ಹಾಡು: ಯಾವ ಭಾಷೆಯಲ್ಲಿ ಅಧಿಕ ವೀಕ್ಷಣೆಇನ್ನು, ಈ ಹಾಡಿನ ಸಾಹಿತ್ಯವನ್ನು ಯೋಗರಾಜ್ ಭಟ್ ಅವರು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದೇ ಪೋಸ್ಟ್ಗೆ ಅಭಿಮಾನಿಗಳು ‘ಹೃದಯಕ್ಕೆ ಮುಟ್ಟುವ ಸಾಲುಗಳು’, ‘ನಿಮಗೆ ನೀವೇ ಸಾಟಿ ಸರ್’ ಎಂದೆಲ್ಲಾ ಕಮೆಂಟ್ ಹಾಕಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಗೀತು ಮೋಹನ್ದಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಟಾಕ್ಸಿಕ್ ಚಿತ್ರದಲ್ಲಿ ಯಶ್ ಅವರು ದ್ವಿಪಾತ್ರದಲ್ಲಿ ನಟಿಸಿದ್ದು, ಇವರ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ರಾಜೀವ್ ರವಿ ಅವರು ಛಾಯಾಚಿತ್ರಗ್ರಹಣ ಮಾಡಿದ್ದಾರೆ. View this post on Instagram ಬೋಲ್ಡ್ ಲುಕ್ನಲ್ಲಿ ಯಶ್, ಕಿಯಾರಾಇದೇ ಮೊದಲ ಬಾರಿಗೆ ಕಿಯಾರಾ ಅಡ್ವಾಣಿ ಜೊತೆಗೆ ಯಶ್ ಅವರು ಬೋಲ್ಡ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಲಿರಿಕಲ್ ಸಾಂಗ್ ಮೂಲಕವೇ ಅಭಿಮಾನಿಗಳ ಗಮನ ಸೆಳೆದಿದ್ದ ತಬಾಹಿ ವಿಡಿಯೊ ನೋಡಿದವರು ಅಚ್ಚರಿಗೊಂಡಿದ್ದಾರೆ. ಇದು ಅಭಿಮಾನಿಗಳಲ್ಲಿ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿಸಿದೆ.‘ಟಾಕ್ಸಿಕ್’ ಸಿನಿಮಾವು ಆಗಸ್ಟ್ 26ರಂದು ತೆರೆಗೆ ಬರಲು ಸಜ್ಜಾಗಿದ್ದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾದ ಈ ಚಿತ್ರವು ಹಿಂದಿ, ತಮಿಳು, ತೆಲುಗು ಸೇರಿ ಹಲವು ಭಾಷೆಗಳಿಗೆ ಡಬ್ ಆಗಿದೆ.