ಚೀನಾ ಶೂ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 28 ಸಾವು
ಬೀಜಿಂಗ್ (ಪಿಟಿಐ): ಪೂರ್ವ ಚೀನಾದ ಫುಜಿಯಾನ್ ಪ್ರಾಂತ್ಯದ, ಜಿನ್ಜಿಯಾಂಗ್ ಪಟ್ಟಣದ ಶೂ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 28 ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಕಾರ್ಯಾಚರಣೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಬೆಂಕಿಯ ಜ್ವಾಲೆ ಸಮೀಪದ ಕಟ್ಟಡಗಳಿಗೂ ವ್ಯಾಪಿಸಿದೆ. ಕಾರ್ಖಾನೆಯೊಳಗೆ ಅನೇಕ ಕಾರ್ಮಿಕರು

ಬೀಜಿಂಗ್ (ಪಿಟಿಐ): ಪೂರ್ವ ಚೀನಾದ ಫುಜಿಯಾನ್ ಪ್ರಾಂತ್ಯದ, ಜಿನ್ಜಿಯಾಂಗ್ ಪಟ್ಟಣದ ಶೂ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 28 ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಕಾರ್ಯಾಚರಣೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಬೆಂಕಿಯ ಜ್ವಾಲೆ ಸಮೀಪದ ಕಟ್ಟಡಗಳಿಗೂ ವ್ಯಾಪಿಸಿದೆ. ಕಾರ್ಖಾನೆಯೊಳಗೆ ಅನೇಕ ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.ರಕ್ಷಣಾ ಕಾರ್ಯಾಚರಣೆ ತ್ವರಿತಗೊಳಿಸುವಂತೆ, ಅವಘಡದ ಕಾರಣ ಪತ್ತೆಹಚ್ಚುವಂತೆ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Read the complete story at Prajavani