ಅಕ್ರಮ ಕೇರಳ ಲಾಟರಿ ಮಾರಾಟಕ್ಕೆ ಬ್ರೇಕ್ – ಆರೋಪಿ ಬಂಧನ, ಟಿಕೆಟ್ಗಳು ವಶ
ಚಾಮರಾಜನಗರ: ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿ, ಲಾಟರಿ ಟಿಕೆಟ್ಗಳು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮುತ್ತುರಾಜು ಅವರ ನಿರ್ದೇಶನದ ಮೇರೆಗೆ ಕಾ

ಚಾಮರಾಜನಗರ: ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿ, ಲಾಟರಿ ಟಿಕೆಟ್ಗಳು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮುತ್ತುರಾಜು ಅವರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯ ಅರಕ್ಷಕ ಉಪನಿರೀಕ್ಷಕ ಕರಿಬಸಪ್ಪ ಅವರಿಗೆ ದೊರೆತ ಖಚಿತ ಮಾಹಿತಿಯಂತೆ, ಜುಲೈ 9ರಂದು ಠಾಣಾ ಸಿಬ್ಬಂದಿಯೊಂದಿಗೆ ಅಗರ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ದಾಳಿ ನಡೆಸಿದರು. ಈ ವೇಳೆ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ಈರಣ್ಣ (44) ಎಂಬ ವ್ಯಕ್ತಿಯನ್ನು ಬಂಧಿಸಿದರು. ಬಂಧಿತ ಆರೋಪಿಯಿಂದ ಲಾಟರಿ ಟಿಕೆಟ್ ಹಾಗೂ ಮಾರಾಟದ ಹಣವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.
Read the complete story at Public TV Kannada