ವಿಯೆಟ್ನಾಂ ದೋಣಿ ದುರಂತದಲ್ಲಿ ಭಾರತೀಯರ ಸಾವು: ಮೋದಿ, ರಾಹುಲ್ ಸೇರಿ ಗಣ್ಯರ ಸಂತಾಪ
ನವದೆಹಲಿ: ವಿಯೆಟ್ನಾಂನ ಫೂ ಕ್ವೋಕ್ ಕರಾವಳಿಯಲ್ಲಿ ಭಾರತೀಯ ಪ್ರವಾಸಿಗರು ಪ್ರಯಾಣಿಸುತ್ತಿದ್ದ ದೋಣಿ ಅಪಘಾತಕ್ಕೀಡಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.‘ವಿಯೆಟ್ನಾಂನ ಫೂ ಕ್ವೋಕ್ ಬಳಿ ಭಾರತೀಯ ಪ್ರವಾಸಿಗರು ಪ್ರಯಾಣಿಸುತ್ತಿದ್ದ ದೋಣಿ ಅಪಘಾತಕ್ಕೀಡಾದ ದುರದೃಷ್ಟಕರ ಸುದ್ದಿಯನ್ನು ಕೇಳ

ನವದೆಹಲಿ: ವಿಯೆಟ್ನಾಂನ ಫೂ ಕ್ವೋಕ್ ಕರಾವಳಿಯಲ್ಲಿ ಭಾರತೀಯ ಪ್ರವಾಸಿಗರು ಪ್ರಯಾಣಿಸುತ್ತಿದ್ದ ದೋಣಿ ಅಪಘಾತಕ್ಕೀಡಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.‘ವಿಯೆಟ್ನಾಂನ ಫೂ ಕ್ವೋಕ್ ಬಳಿ ಭಾರತೀಯ ಪ್ರವಾಸಿಗರು ಪ್ರಯಾಣಿಸುತ್ತಿದ್ದ ದೋಣಿ ಅಪಘಾತಕ್ಕೀಡಾದ ದುರದೃಷ್ಟಕರ ಸುದ್ದಿಯನ್ನು ಕೇಳಿ ತೀವ್ರ ಆಘಾತ ಮತ್ತು ಬೇಸರವಾಗಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.‘ನಮ್ಮ ರಾಯಭಾರ ಕಚೇರಿಯ ಅಧಿಕಾರಿಗಳು ಬಾಧಿತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ನೆರವನ್ನು ಒದಗಿಸುತ್ತಿದ್ದಾರೆ. ಜತೆಗೆ, ವಿಯೆಟ್ನಾಂ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.Extremely saddened to learn about the tragic news of a boat accident involving Indian nationals near Phu Quoc, Vietnam. My sincere condolences to the families who lost their loved ones. My prayers for the early recovery of the injured survivors.Our Embassy and Consulate are…— Narendra Modi (@narendramodi) July 11, 2026 ‘ವಿಯೆಟ್ನಾಂನ ಫೂ ಕ್ವೋಕ್ ದ್ವೀಪದ ಬಳಿ ಭಾರತೀಯ ಪ್ರವಾಸಿಗರಿದ್ದ ದೋಣಿ ಮುಳುಗಡೆಯಾದ ದುರಂತದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.‘ಪ್ರಸ್ತುತ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲು ಮತ್ತು ಬಾಧಿತ ಕುಟುಂಬಗಳಿಗೆ ಅಗತ್ಯವಿರುವ ನೆರವು ಒದಗಿಸಲು ವಿಯೆಟ್ನಾಂ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.Deeply saddened by the tragic boat capsizing near Phu Quoc Island, Vietnam, carrying Indian tourists.My heartfelt condolences to the families who have lost their loved ones. My thoughts are also with those who are still missing, and with their families enduring an agonising…— Rahul Gandhi (@RahulGandhi) July 11, 2026 ‘ದೋಣಿ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ವಿಯೆಟ್ನಾಂ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯತೆಯೊಂದಿಗೆ ಕೆಲಸ ಮಾಡಲು ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆಯೇ ಎಂಬುದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಖಚಿತಪಡಿಸಿಕೊಳ್ಳಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.The tragic boat capsizing near Phu Quoc Island in Vietnam, carrying Indian tourists, is deeply distressing.I extend my heartfelt condolences to the families who have lost their loved ones and pray for strength and courage for those anxiously awaiting news of their missing…— Mallikarjun Kharge (@kharge) July 11, 2026 ದುರಂತದಲ್ಲಿ 15 ಭಾರತೀಯ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ದೋಣಿಯಲ್ಲಿ 32 ಭಾರತೀಯ ಪ್ರವಾಸಿಗರು ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎಂದು ವಿಯೆಟ್ನಾಂನ ಮಾಧ್ಯಮಗಳು ವರದಿ ಮಾಡಿವೆ.#WATCH | Tourist boat carrying Indian tourists, capsized in Vietnam | The Region 4 Coast Guard Command continues to direct its forces to coordinate closely with other authorities in handling the aftermath of the incident and will provide further updates in accordance with… pic.twitter.com/CdlnYoFhBB— ANI (@ANI) July 11, 2026