ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ–ಸತೀಶ ಜಾರಕಿಹೊಳಿ
ಚಿಕ್ಕೋಡಿ: ‘ಅಖಂಡ ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಹಲವು ಮಹತ್ವದ ಬದಲಾವಣೆ ನಡೆಯಲಿವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಚಿಕ್ಕೋಡಿ ಲೋಕಸಭೆ ಸದಸ್ಯರ ಕಚೇರಿಯಲ್ಲಿ ಭಾನುವಾರ ಸಾರ್ವಜನಿಕರ ಸಮಸ್ಯೆ ಆಲಿಸಿದ ಬಳಿಕ ಮಾಧ್ಯಮಗಳೊಂದಿಗೆ

ಚಿಕ್ಕೋಡಿ: ‘ಅಖಂಡ ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಹಲವು ಮಹತ್ವದ ಬದಲಾವಣೆ ನಡೆಯಲಿವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಚಿಕ್ಕೋಡಿ ಲೋಕಸಭೆ ಸದಸ್ಯರ ಕಚೇರಿಯಲ್ಲಿ ಭಾನುವಾರ ಸಾರ್ವಜನಿಕರ ಸಮಸ್ಯೆ ಆಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮಳೆ ಕೊರತೆಯಿಂದ ಹಲವೆಡೆ ಬೆಳೆ ಹಾನಿಯಾಗಿದೆ. ಜಂಟಿ ಸಮೀಕ್ಷೆ ನಡೆಸಿ ಪರಿಹಾರ ನೀಡುವ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಚಿಕ್ಕೋಡಿ ಭಾಗದಲ್ಲಿ ಈಗ ಕುಡಿಯುವ ನೀರಿನ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಹೊಂದಲಾಗಿದೆ’ ಎಂದರು.‘ಬೆಳಗಾವಿಯಲ್ಲಿ ನಡೆದ ಆರ್ಎಸ್ಎಸ್ ಸಭೆಯಿಂದ ಅನಾಹುತವಾಗಲಿದೆ’ ಎಂಬ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಹೇಳಿಕೆಗೆ ಪ್ರತಿಕ್ರಿಯಿಸಲು ಸಚಿವ ಜಾರಕಿಹೊಳಿ ನಿರಾಕರಿಸಿದರು.ಅಕ್ರಮ ವಲಸಿಗರಿಗೆ ನಿಯಮಾನುಸಾರವೇ ಶಾಶ್ವತ ನಿವಾಸಿ ಪತ್ರ ನೀಡಲಾಗುತ್ತಿದೆ. ಈ ವಿಷಯದಲ್ಲಿ ವಿರೋಧ ಪಕ್ಷದ ಟೀಕೆಯಲ್ಲಿ ಯಾವುದೇ ಹುರುಳಿಲ್ಲ. ಯಾರು ಇಲ್ಲಿನ ನಿವಾಸಿಗಳು ಅಲ್ಲವೋ ಮತ್ತು ಯಾರ ಬಳಿ ನಕಲಿ ದಾಖಲೆ ಇವೆಯೋ ಎಂಬುದಕ್ಕೆ ಬಿಜೆಪಿ ನಾಯಕರು ಪುರಾವೆ ನೀಡಲಿ. ಕಾನೂನು ಚೌಕಟ್ಟು ಮೀರಿ ಯಾರೊಬ್ಬರಿಗೂ ಯಾವುದೇ ಸೌಲಭ್ಯ ನೀಡುವುದಿಲ್ಲ ಎಂದರು.ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ರುದ್ರಪ್ಪ ಸಂಗಪ್ಪಗೋಳ, ರಾಮಕೃಷ್ಣ ಪಾನಬುಡೆ ಇದ್ದರು.