ಫಿಫಾ ವಿಶ್ವಕಪ್: ರೋಚಕ ಗೆಲುವು ದಾಖಲಿಸಿ ಸೆಮಿಫೈನಲ್ ತಲುಪಿದ ಮೆಸ್ಸಿಯ ಅರ್ಜೆಂಟೀನಾ
ಕಾನ್ಸಾಸ್ ಸಿಟಿ: ಇಲ್ಲಿ ನಡೆದ ಫಿಫಾ ವಿಶ್ವಕಪ್ 2026ರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲಯೊನೆಲ್ ಮೆಸ್ಸಿ ನಾಯಕತ್ವದ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವು ಹೆಚ್ಚುವರಿ ಸಮಯದಲ್ಲಿ ಸ್ವಿಟ್ಜರ್ಲೆಂಡ್ ತಂಡವನ್ನು 3-1 ಗೋಲುಗಳಿಂದ ಮಣಿಸಿ ವಿಶ್ವಕಪ್ ಸೆಮಿಫೈನಲ್ ತಲುಪಿದೆ.ಪಂದ್ಯ ಆರಂಭವಾದ 10ನೇ ನಿಮಿಷದಲ್ಲಿ ಅರ್ಜೆಂಟೀನಾ ಪರ ಅಲೆಕ್ಸಿಸ್ ಮ್ಯಾಕ್ ಅಲಿಸ್ಟರ್ ಅವರು ಗೋಲು ಗಳ
ಕಾನ್ಸಾಸ್ ಸಿಟಿ: ಇಲ್ಲಿ ನಡೆದ ಫಿಫಾ ವಿಶ್ವಕಪ್ 2026ರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲಯೊನೆಲ್ ಮೆಸ್ಸಿ ನಾಯಕತ್ವದ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವು ಹೆಚ್ಚುವರಿ ಸಮಯದಲ್ಲಿ ಸ್ವಿಟ್ಜರ್ಲೆಂಡ್ ತಂಡವನ್ನು 3-1 ಗೋಲುಗಳಿಂದ ಮಣಿಸಿ ವಿಶ್ವಕಪ್ ಸೆಮಿಫೈನಲ್ ತಲುಪಿದೆ.ಪಂದ್ಯ ಆರಂಭವಾದ 10ನೇ ನಿಮಿಷದಲ್ಲಿ ಅರ್ಜೆಂಟೀನಾ ಪರ ಅಲೆಕ್ಸಿಸ್ ಮ್ಯಾಕ್ ಅಲಿಸ್ಟರ್ ಅವರು ಗೋಲು ಗಳಿಸುವ ಆರಂಭಿಕ ಮುನ್ನಡೆ ಒದಗಿಸಿದರು. ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಸ್ವಿಟ್ಜರ್ಲೆಂಡ್ ಕ್ರಮೇಣ ಸ್ಪರ್ಧೆಗೆ ಧುಮುಕಿತು. ಪಂದ್ಯದ 67ನೇ ನಿಮಿಷದಲ್ಲಿ ಡ್ಯಾನ್ ಎನ್ಡೋಯ್ (Dan Ndoye) ಗೋಲು ದಾಖಲಿಸಿ, ಸಮಬಲ ಸಾಧಿಸಲು ನೆರವಾದರು.ಇದಾದ ಕೆಲವೇ ನಿಮಿಷಗಳಲ್ಲಿ ಪಂದ್ಯದಲ್ಲಿ ಎರಡು ಬಾರಿ ಹಳದಿ ಕಾರ್ಡ್ ಪಡೆದ ಸ್ವಿಟ್ಜರ್ಲೆಂಡ್ ತಂಡದ ಬ್ರೀಲ್ ಎಂಬೊಲೊ ಅವರು ಮೈದಾನದಿಂದ ಹೊರನಡೆಯಬೇಕಾಯಿತು. ಈ ಹಂತದಲ್ಲಿ ಸ್ವಿಟ್ಜರ್ಲೆಂಡ್ ತಂಡವು ಹಿನ್ನಡೆ ಅನುಭವಿಸಿತು. ಅಲ್ಲಿಂದ 10 ಆಟಗಾರರ ಜೊತೆ ಆಡಿದ ಸ್ವಿಜ್ ಪೂರ್ಣಾವಧಿ ಮುಗಿಯುವ ವೇಳೆಗೆ ಅರ್ಜೆಂಟೀನಾ ತಂಡಕ್ಕೆ ಯಾವುದೇ ಹೆಚ್ಚುವರಿ ಗೋಲು ದಾಖಲಿಸಲು ಬಿಡಲಿಲ್ಲ.90 ನಿಮಿಷಗಳ ಆಟ ಪೂರ್ಣಗೊಂಡಾಗ ಉಭಯ ತಂಡಗಳು ತಲಾ ಒಂದೊಂದು ಗೋಲು ದಾಖಲಿಸಿ, ಸಮಬಲ ಸಾಧಿಸಿದ್ದರಿಂದ ಹೆಚ್ಚುವರಿ ಸಮಯ ನೀಡಲಾಯಿತು. ಈ ಹಂತದಲ್ಲಿ ಅರ್ಜೆಂಟೀನಾ ಪರ 112ನೇ ನಿಮಿಷದಲ್ಲಿ ಜೂಲಿಯನ್ ಅಲ್ವಾರೆಜ್ ಗೋಲು ದಾಖಲಿಸಿ ಮುನ್ನಡೆ ತಂದುಕೊಟ್ಟರು. ಅಂತಿಮ ಹಂತದಲ್ಲಿ ಲೌಟಾರೊ ಮಾರ್ಟಿನೆಜ್ ಮತ್ತೊಂದು ಗೋಲು ದಾಖಲಿಸುವ ಮೂಲಕ ಅರ್ಜೆಂಟೀನಾ ತಂಡಕ್ಕೆ 3–1ರ ಅಂತರದಲ್ಲಿ ಗೆಲುವು ಸಾಧಿಸಲು ನೆರವಾದರು.The Argentine players chanting at Full time:“For Leo’s last World Cup” They’ll give everything for this man on the pitch. ❤️pic.twitter.com/X3xsdSypEF— MC (@CrewsMat10) July 12, 2026 ಈ ಪಂದ್ಯದಲ್ಲಿ ಅರ್ಜೆಂಟೀನಾ ನಾಯಕ ಲಯೊನೆಲ್ ಮೆಸ್ಸಿ ಯಾವುದೇ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.