ಹೊಸಕೋಟೆ ಬಳಿ ಕ್ಯಾಂಟರ್ ಡಿಕ್ಕಿ, ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿ
ಹೊಸಕೋಟೆ: ನಗರದ ಸಮೀಪ ಕೊಳತೂರು ಗೇಟ್ ಬಳಿ ಹೊಸಕೋಟೆಯಿಂದ ಕೋಲಾರಕ್ಕೆ ಹೋಗುತ್ತಿದ್ದ ಕ್ಯಾಂಟರ್ ವಾಹನ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ಮಧ್ಯೆ ಇದ್ದ ಹತ್ತಕ್ಕೂ ಹೆಚ್ಚು ಸೋಲಾರ್ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿದೆ.ನೆಲಮಂಗಲದ ಕ್ಯಾಂಟರ್ ಚಾಲಕ ರೋಹಿತ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕ್ಯಾಂಟರ್ ಚಾಲಕ ಮದ್ಯಪಾನ ಮಾಡಿ ಅಜಾಗರೂಕತೆ

ಹೊಸಕೋಟೆ: ನಗರದ ಸಮೀಪ ಕೊಳತೂರು ಗೇಟ್ ಬಳಿ ಹೊಸಕೋಟೆಯಿಂದ ಕೋಲಾರಕ್ಕೆ ಹೋಗುತ್ತಿದ್ದ ಕ್ಯಾಂಟರ್ ವಾಹನ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ಮಧ್ಯೆ ಇದ್ದ ಹತ್ತಕ್ಕೂ ಹೆಚ್ಚು ಸೋಲಾರ್ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿದೆ.ನೆಲಮಂಗಲದ ಕ್ಯಾಂಟರ್ ಚಾಲಕ ರೋಹಿತ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕ್ಯಾಂಟರ್ ಚಾಲಕ ಮದ್ಯಪಾನ ಮಾಡಿ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಅಪಘಾತದ ವೇಳೆ ವಾಹನಗಳ ಓಡಾಟ ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260712-15-1852558512
Read the complete story at Prajavani