ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ಅಗತ್ಯ; ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ
– ಲೋಕಾಯುಕ್ತ ಅರ್ಜಿ ವಜಾ ನವದೆಹಲಿ: ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ( Karnataka High Court) ನೀಡಿದ್ದ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ (Supreme Court)ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾ

– ಲೋಕಾಯುಕ್ತ ಅರ್ಜಿ ವಜಾ ನವದೆಹಲಿ: ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ( Karnataka High Court) ನೀಡಿದ್ದ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ (Supreme Court)ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಪ್ರತಿಯೊಂದು ಭ್ರಷ್ಟಾಚಾರ ಪ್ರಕರಣದಲ್ಲೂ ಪ್ರಾಥಮಿಕ ತನಿಖೆ ಕಡ್ಡಾಯವಲ್ಲ. ಆದರೆ, ಮೂಲ ಮಾಹಿತಿ ಅಪೂರ್ಣವಾಗಿದ್ದರೆ ಅಥವಾ ಆರೋಪಗಳಿಗೆ ಸಾಕಷ್ಟು ಆಧಾರ ಇಲ್ಲದಿದ್ದರೆ, ಪ್ರಾಥಮಿಕ ತನಿಖೆ ನಡೆಸುವುದು ಅಗತ್ಯ ಎಂದು ಹೈಕೋರ್ಟ್ ಹೇಳಿದ್ದ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಈ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ರ ಅಡಿಯಲ್ಲಿ ದಾಖಲಾಗಿದ್ದ ಎಫ್ಐಆರ್ ಮತ್ತು ಅದರ ಆಧಾರದ ಮೇಲೆ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಈ ಹಿಂದೆ ರದ್ದುಪಡಿಸಿತ್ತು. ಜೊತೆಗೆ, ಮುಂದಿನ ಕ್ರಮ ಕೈಗೊಳ್ಳುವ ಮೊದಲು ಸೂಕ್ತ ಪ್ರಾಥಮಿಕ ತನಿಖೆ ನಡೆಸುವಂತೆ ಸೂಚಿಸಿತ್ತು.ಇದನ್ನೂ ಓದಿ: ತಿಮ್ಮಪ್ಪನಿಗೆ ಕರ್ನಾಟಕದ ಹೆಸರಲ್ಲೇ ಮೊದಲ ಆರತಿ – ರಾಜ್ಯದ ಗಣ್ಯರೇ ಭಾಗವಹಿಸಲು ಅವಕಾಶ ಈ ತೀರ್ಪಿನ ವಿರುದ್ಧ ಕರ್ನಾಟಕ ಲೋಕಾಯುಕ್ತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್, ಲೋಕಾಯುಕ್ತದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ತೀರ್ಪಿನ ಸಿಂಧುತ್ವವನ್ನು ಎತ್ತಿಹಿಡಿದಿದೆ.ಇದನ್ನೂ ಓದಿ: ಟೌನ್ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ