ವಿದ್ಯುತ್ ಪ್ರವಹಿಸಿ ವ್ಯಕ್ತಿಯ ಸಾವು: ಪಿಡಿಒ ವಿರುದ್ಧದ ವಿಚಾರಣೆಗೆ ತಡೆ
ಬೆಂಗಳೂರು: ಕೊಳವೆ ಬಾವಿಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಚಳ್ಳಕೆರೆ ತಾಲ್ಲೂಕಿನ ಮನ್ನೇಕೋಟೆ ಗ್ರಾಮ ಪಂಚಾಯಿತಿ (ಪಂಚಾಯಿತಿ ಅಭಿವೃದ್ಧಿ ಅಧಿಕಾರಿ) ಎಂ.ಎಚ್.ಗಿರೀಶ್ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದರ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.‘ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಳಕಾಲ್ಮೂರಿನ ಪ್ರಧ
ಬೆಂಗಳೂರು: ಕೊಳವೆ ಬಾವಿಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಚಳ್ಳಕೆರೆ ತಾಲ್ಲೂಕಿನ ಮನ್ನೇಕೋಟೆ ಗ್ರಾಮ ಪಂಚಾಯಿತಿ (ಪಂಚಾಯಿತಿ ಅಭಿವೃದ್ಧಿ ಅಧಿಕಾರಿ) ಎಂ.ಎಚ್.ಗಿರೀಶ್ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದರ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.‘ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಳಕಾಲ್ಮೂರಿನ ಪ್ರಧಾನ ಸಿವಿಲ್ (ಕಿರಿಯ ವಿಭಾಗ) ಮತ್ತು ಜೆಎಂಎಫ್ಸಿ ಕೋರ್ಟ್ನಲ್ಲಿರುವ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಪಿಡಿಒ ಎಂ.ಎಚ್.ಗಿರೀಶ್ (51) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿತು.‘ಪ್ರಕರಣಕ್ಕೂ ಪಿಡಿಒ ಆಗಿರುವ ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ. ಆದಾಗ್ಯೂ, ಬೆಸ್ಕಾಂ ಅಧಿಕಾರಿಗಳನ್ನು ಯಾಕೆ ಕೈ ಬಿಡಲಾಗಿದೆ’ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠ, ‘ಈ ಬಗ್ಗೆ ಸಂಬಂಧಪಟ್ಟವರಿಂದ ಅಗತ್ಯ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸಬೇಕು’ ಸೂಚಿಸಿದೆ. ಪ್ರತಿವಾದಿಯಾದ ತಳಕು ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.