ಆ.6ರಿಂದ ಮುಂಗಾರು ಅಧಿವೇಶನ; ಮೂರ್ನಾಲ್ಕು ದಿನದಲ್ಲಿ ಹೈಕಮಾಂಡ್ ದೆಹಲಿಗೆ ಕರೆಯಬಹುದು: ಡಿಕೆಶಿ
ಬೆಂಗಳೂರು: ಆಗಸ್ಟ್ 6ರಿಂದ ಮುಂಗಾರು ಅಧಿವೇಶನ (Monsoon Session) ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿಕೆಶಿ (DK Shivakumar) ಹೇಳಿದ್ದಾರೆ. ಕೃಷ್ಣಾದಲ್ಲಿ ಮಾತನಾಡಿದ ಅವರು, ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ ಎಂದು ಮಾಹಿತಿ

ಬೆಂಗಳೂರು: ಆಗಸ್ಟ್ 6ರಿಂದ ಮುಂಗಾರು ಅಧಿವೇಶನ (Monsoon Session) ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿಕೆಶಿ (DK Shivakumar) ಹೇಳಿದ್ದಾರೆ. ಕೃಷ್ಣಾದಲ್ಲಿ ಮಾತನಾಡಿದ ಅವರು, ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: Delhi Riots 2020 | ಐಬಿ ಅಧಿಕಾರಿ ಹತ್ಯೆ ಕೇಸಲ್ಲಿ ಆಪ್ ಮಾಜಿ ಕೌನ್ಸಿಲರ್ ತಾಹಿರ್ ಸೇರಿ ಐವರು ದೋಷಿ ಇನ್ನು ತಿರುಪತಿಯಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗಿದ್ದು, ಶಾಸಕರಿಗೂ ಅವಕಾಶ ಕೊಡುವ ಬಗ್ಗೆ ಮಾತನಾಡಿದ ಅವರು, ತಿರುಪತಿಯಲ್ಲಿ ಮಹಾರಾಜರ ಕಾಲದಿಂದಲೂ ಮೊದಲ ಆರತಿ ಕರ್ನಾಟಕದ್ದಾಗಿದೆ. ಅಲ್ಲಿ ಪ್ರತಿದಿನ ಅಧಿಕಾರಿಯೊಬ್ಬರು ಆರತಿ ಪಡೆಯುತ್ತಾರೆ. ಆ ಅಧಿಕಾರಿ ಬದಲಿಗೆ ಇಲ್ಲಿಂದ ದರ್ಶನಕ್ಕೆ ಹೋಗುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳಿಗೆ, ಸಂಸದರು, ಮೇಯರ್, ತಹಶೀಲ್ದಾರ್ ಸೇರಿದಂತೆ ನಮ್ಮ ರಾಜ್ಯದವರಿಗೆ ಅವಕಾಶ ನೀಡಲಾಗುವುದು. ಇದು ನಿರ್ದಿಷ್ಟ ಪಕ್ಷಕ್ಕೆ ಎಂದು ಸೀಮಿತವಲ್ಲ. ಯಾವುದೇ ಪಕ್ಷದ ಜನಪ್ರತಿನಿಧಿಗಳು ಹೋದರು ಈ ಅವಕಾಶ ಅವರಿಗೆ ಸಿಗಬೇಕು. ಇದಕ್ಕೆ ನಿರ್ದಿಷ್ಟ ಮಾರ್ಗಸೂಚಿಗಳಿದ್ದು, ಅದರಂತೆಯೇ ಈ ಅವಕಾಶ ನೀಡಲಾಗುವುದು. ನಮ್ಮ ತೀರ್ಮಾನ ಕೇವಲ ಆರತಿ ವಿಚಾರಕ್ಕೆ ಮಾತ್ರ. ಉಳಿದಂತೆ ಎಲ್ಲಾ ಮಾರ್ಗಸೂಚಿಗಳು ತಿರುಪತಿ ಆಡಳಿತ ಮಂಡಳಿಯಂತೆ ಇರಲಿದೆ. ಅವರ ಮಾರ್ಗಸೂಚಿಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕಲಬುರಗಿಗೆ 24×7 ನೀರು ಯೋಜನೆ; ಜೂ. 2027ರೊಳಗೆ ಕಾಮಗಾರಿ ಪೂರ್ಣಗೊಳಿಸಲು ಯತೀಂದ್ರ ಗಡುವು