ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ‘ಸಚಿವ ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗುತ್ತದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಶಾಸಕರಾದ ಟಿ.ಡಿ. ರಾಜೇಗೌಡ, ಅಶೋಕ ಪಟ್ಟಣ, ಕೆ.ಎಂ. ಶಿವಲಿಂಗೇಗೌಡ ಅವರು ಖರ್ಗೆ ಅವರನ್ನು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿದ್ದಾರೆ. ಸಂಪುಟ ವಿಸ್ತರಣೆಯ ವೇಳೆ ತಮ್ಮನ್ನು ಪರಿಗಣಿಸುವಂತೆ ಅಹವಾಲು ಸಲ್ಲಿ

ಬೆಂಗಳೂರು: ‘ಸಚಿವ ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗುತ್ತದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಶಾಸಕರಾದ ಟಿ.ಡಿ. ರಾಜೇಗೌಡ, ಅಶೋಕ ಪಟ್ಟಣ, ಕೆ.ಎಂ. ಶಿವಲಿಂಗೇಗೌಡ ಅವರು ಖರ್ಗೆ ಅವರನ್ನು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿದ್ದಾರೆ. ಸಂಪುಟ ವಿಸ್ತರಣೆಯ ವೇಳೆ ತಮ್ಮನ್ನು ಪರಿಗಣಿಸುವಂತೆ ಅಹವಾಲು ಸಲ್ಲಿಸಿದ್ದಾರೆ.ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಖರ್ಗೆ ಅವರು, ‘ರಾಹುಲ್ ಗಾಂಧಿಯವರ ಜೊತೆ ಚರ್ಚೆ ಮಾಡಿ ಆದಷ್ಟು ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ’ ಎಂದರು.ಅಶೋಕ ಪಟ್ಟಣ ಮಾತನಾಡಿ, ‘ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದೇವೆ. ರಾಜ್ಯ ನಾಯಕರನ್ನು 2–3 ದಿನಗಳಲ್ಲಿ ದೆಹಲಿಗೆ ಕರೆಯುವ ಸಾಧ್ಯತೆ ಇದೆ’ ಎಂದರು. ‘ಜಾತಿ ನೋಡಬೇಡಿ, ಪಕ್ಷ ನಿಷ್ಠೆ ನೋಡಿಕೊಂಡು ಸಚಿವ ಸ್ಥಾನ ಕೊಡುವಂತೆ ಪಕ್ಷದ ಹಿರಿಯರಿಗೆ ಮನವಿ ಮಾಡುತ್ತೇನೆ. ಅದರಿಂದ ಪಕ್ಷಕ್ಕೂ ಒಳ್ಳೆಯದಾಗುತ್ತದೆ. ಬೆಳಗಾವಿಯಲ್ಲಿ ನಾನು ಹಿರಿಯ ಶಾಸಕ’ ಎಂದರು.
Read the complete story at Prajavani