ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಅನಾರೋಗ್ಯದಿಂದ ಇಂದು (ಮಂಗಳವಾರ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ.‘ಮತ್ತೋರ್ವ ಸೋದರನನ್ನು ನಾನು ಕಳೆದುಕೊಂಡಿದ್ದೇನೆ. ನನ್ನ ದಶಕಗಳ ಕಾಲದ ಆತ್ಮೀಯ ಒಡ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಅನಾರೋಗ್ಯದಿಂದ ಇಂದು (ಮಂಗಳವಾರ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ.‘ಮತ್ತೋರ್ವ ಸೋದರನನ್ನು ನಾನು ಕಳೆದುಕೊಂಡಿದ್ದೇನೆ. ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಜನಸಂಘದ ದಿನಗಳಿಂದಲೂ ಹೆಗಲಿಗೆ ಹೆಗಲು ಕೊಟ್ಟು, ಹಗಲಿರುಳು ಶ್ರಮಿಸಿ, ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಜೊತೆಯಾಗಿ ಕಟ್ಟಿದ ಹೋರಾಟದ ದಿನಗಳು ಕಣ್ಣಮುಂದೆ ಸುಳಿಯುತ್ತಿವೆ. ನನ್ನ ಸಚಿವ ಸಂಪುಟದ ಸಹೋದ್ಯೋಗಿಯಾಗಿ ಅವರ ಆಡಳಿತಾತ್ಮಕ ದಕ್ಷತೆ ಹಾಗೂ ಬದ್ಧತೆಯನ್ನು ನಾನು ಅತ್ಯಂತ ಹತ್ತಿರದಿಂದ ಕಂಡಿದ್ದೇನೆ’ ಎಂದು ಬಿ.ಎಸ್. ಯಡಿಯೂರಪ್ಪ ‘ಎಕ್ಸ್’ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ‘ರಾಮಚಂದ್ರಗೌಡರ ಅಗಲಿಕೆ ಪಕ್ಷಕ್ಕೆ, ಸಾರ್ವಜನಿಕ ಕ್ಷೇತ್ರಕ್ಕೆ ಮಾತ್ರವಲ್ಲ, ವೈಯಕ್ತಿಕವಾಗಿ ನನ್ನಲ್ಲಿಯೂ ದೊಡ್ಡ ನಿರ್ವಾತವನ್ನು ಸೃಷ್ಟಿಸಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ಬಿಎಸ್ವೈ ತಿಳಿಸಿದ್ದಾರೆ. ಮತ್ತೋರ್ವ ಸೋದರನನ್ನು ನಾನು ಕಳೆದುಕೊಂಡಿದ್ದೇನೆ. ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶ್ರೀ ರಾಮಚಂದ್ರ ಗೌಡರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಜನಸಂಘದ ದಿನಗಳಿಂದಲೂ ಹೆಗಲಿಗೆ ಹೆಗಲು ಕೊಟ್ಟು, ಹಗಲಿರುಳು ಶ್ರಮಿಸಿ, ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಜೊತೆಯಾಗಿ ಕಟ್ಟಿದ ಹೋರಾಟದ ದಿನಗಳು… pic.twitter.com/GHqxysv9nP— B.S.Yediyurappa (@BSYBJP) July 14, 2026