ಮಳೆಯ ನಡುವೆಯೇ ಉತ್ತರ ಕನ್ನಡದಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್ ಘೋಷಣೆ
ಕಾರವಾರ: ಮಳೆಗಾಲ ಆರಂಭವಾಗಿದ್ದರೂ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಾತ್ರ ಕಳೆದ ಮೂರು-ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆ ಕಂಡಿದೆ. ಆದರೇ ಇದೀಗ ಮಳೆ ನಡುವೆಯೇ ಬಿಸಿ ಗಾಳಿ ಹಾಗೂ ತೇವಾಂಶಯುಕ್ತ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ (Heatwave) ಹ

ಕಾರವಾರ: ಮಳೆಗಾಲ ಆರಂಭವಾಗಿದ್ದರೂ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಾತ್ರ ಕಳೆದ ಮೂರು-ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆ ಕಂಡಿದೆ. ಆದರೇ ಇದೀಗ ಮಳೆ ನಡುವೆಯೇ ಬಿಸಿ ಗಾಳಿ ಹಾಗೂ ತೇವಾಂಶಯುಕ್ತ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ (Heatwave) ಹಾಗೂ ತೇವಾಂಶಯುಕ್ತ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಈ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಳೆಯ ಕೊರತೆಯ ಜೊತೆಗೆ ಹೆಚ್ಚಿದ ತೇವಾಂಶದಿಂದ ಬಿಸಿಯ ಅನುಭವ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಮಧ್ಯಾಹ್ನದ ವೇಳೆಯಲ್ಲಿ ಅನಗತ್ಯವಾಗಿ ಹೊರಗಡೆ ಓಡಾಡದಂತೆ, ಸಾಕಷ್ಟು ನೀರು ಹಾಗೂ ದ್ರವಾಹಾರ ಸೇವಿಸುವಂತೆ ಸಲಹೆ ನೀಡಲಾಗಿದೆ. ಇದನ್ನೂ ಓದಿ: ಮನೆ ಮನೆಗೆ ಹೋಗದೆ ಒಂದೇ ಕಡೆ ಕುಳಿತು SIR ಪ್ರಕ್ರಿಯೆ; BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಇರುವವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಹೊರಾಂಗಣದಲ್ಲಿ ಕೆಲಸ ಮಾಡುವವರು ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: 14 ವರ್ಷಗಳ ಬಳಿಕ ಮತ್ತದೇ ಕುಟುಂಬದ ಮೇಲೆ ದಾಳಿ – ಊರು ಬಿಟ್ಟರೂ ಹುಡುಕಿ ಬಂದು ಇಬ್ಬರನ್ನು ಬಲಿ ಪಡೆದ ಕಾಡಾನೆ