13 ‘ರೋಪ್ವೇ’ಗಳ ತ್ವರಿತ ಅನುಷ್ಠಾನ: ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ಬೆಟ್ಟದ ಮೇಲಿರುವ ಅಥವಾ ಆಕರ್ಷಣೀಯ ಜಲಪಾತಗಳಿರುವ ರಾಜ್ಯದ 13 ತಾಣಗಳಿಗೆ ಪ್ರವಾಸಿಗರನ್ನು ಸೆಳೆಯಲು ರೂಪಿಸಿರುವ ‘ರೋಪ್ವೇ’ ಯೋಜನೆಗಳನ್ನು ತ್ವರಿತ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ.ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು, ‘ಯೋಜನೆಗಳಿಗೆ ಟೆಂಡರ್ ಆಹ್ವಾನಿಸುವ ಮೊದಲು ಅರಣ್ಯ, ಪರಿಸರ ಸೇರಿದಂತೆ ಎಲ

ಬೆಂಗಳೂರು: ಬೆಟ್ಟದ ಮೇಲಿರುವ ಅಥವಾ ಆಕರ್ಷಣೀಯ ಜಲಪಾತಗಳಿರುವ ರಾಜ್ಯದ 13 ತಾಣಗಳಿಗೆ ಪ್ರವಾಸಿಗರನ್ನು ಸೆಳೆಯಲು ರೂಪಿಸಿರುವ ‘ರೋಪ್ವೇ’ ಯೋಜನೆಗಳನ್ನು ತ್ವರಿತ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ.ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು, ‘ಯೋಜನೆಗಳಿಗೆ ಟೆಂಡರ್ ಆಹ್ವಾನಿಸುವ ಮೊದಲು ಅರಣ್ಯ, ಪರಿಸರ ಸೇರಿದಂತೆ ಎಲ್ಲ ಇಲಾಖೆಗಳ ಅನುಮತಿ ಪಡೆದುಕೊಳ್ಳಬೇಕು. ಅನುಷ್ಠಾನದಲ್ಲಿನ ವಿಳಂಬ ತಪ್ಪಿಸಿ, ನಿಗದಿತ ಅವಧಿಯ ಒಳಗೆ ಕಾಮಗಾರಿ ಆರಂಭಿಸಬೇಕು’ ಎಂದು ನಿರ್ದೇಶನ ನೀಡಿದರು.‘ನಿಗದಿಪಡಿಸಿರುವ ರೋಪ್ವೇ ಯೋಜನೆಗಳಿಗೆ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನು ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸ್ ಸಂಸ್ಥೆಗೆ ವಹಿಸಲಾಗಿದೆ. ಈಗಾಗಲೇ ಎಂಟು ಯೋಜನೆಗಳ ವರದಿಗಳು ಪೂರ್ಣಗೊಂಡಿವೆ. ಉಳಿದ ಯೋಜನೆಗಳ ಕಾರ್ಯಸಾಧ್ಯತಾ ವರದಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.‘ರೋಪ್ವೇ ಯೋಜನೆಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರವಾಸೋದ್ಯಮ ಇಲಾಖೆಯ ಆಯುಕ್ತರು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಗಳ ಜತೆ ಸಮನ್ವಯ ಸಾಧಿಸಿ,ಅನುಮತಿ ಪಡೆಯಬೇಕು’ ಎಂದು ಸಲಹೆ ನೀಡಿದರು.‘ರೋಪ್ವೇ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಪ್ರಮುಖ ಧಾರ್ಮಿಕ, ಪಾರಂಪರಿಕ ಹಾಗೂ ಪ್ರಕೃತಿ ಪ್ರವಾಸಿ ತಾಣಗಳಿಗೆ ಸುಲಭ ಸಂಪರ್ಕ ಸಿಗಲಿದೆ’ ಎಂದರು.ಮುಳ್ಳಯ್ಯನಗಿರಿ ರೋಪ್ವೇ ಯೋಜನೆಗೆ ಅನುಮತಿ ಸಿಗದೆ ಕಾರ್ಯಸಾಧ್ಯತಾ ವರದಿ ವಿಳಂಬವಾಗಿದೆ. ತಕ್ಷಣ ಅನುಮತಿ ಪಡೆಯಬೇಕು. ತಿಂಗಳ ಒಳಗೆ ಕಾರ್ಯಸಾಧ್ಯತಾ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.ಗೋಕಾಕ್ ಜಲಪಾತ ವ್ಯಾಪ್ತಿಯಲ್ಲಿ ರೋಪ್ವೇ ಯೋಜನೆಗೆ ಹಣಕಾಸು ಇಲಾಖೆಯ ಅನುಮತಿ ಸಿಕ್ಕಿದ್ದು, ಮುಂದಿನ ಸಚಿವ ಸಂಪುಟ ಸಭೆಯ ಅನುಮೋದನೆಗೆ ಮಂಡಿಸಲಾಗುವುದು ಎಂದು ಜಾರ್ಜ್ ಹೇಳಿದರು. ಬೆಳಗಾವಿ ಜಿಲ್ಲೆಯ ಗೋಕಾಕ್ ಜಲಪಾತ, ಯಾದಗಿರಿ ಜಿಲ್ಲೆಯ ಮೈಲಾರ ಲಿಂಗೇಶ್ವರ ದೇವಸ್ಥಾನ, ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಹಾವೇರಿ ಜಿಲ್ಲೆಯ ದೇವರಗುಡ್ಡ ಮಾಲತೇಶ ದೇವಸ್ಥಾನದ ರೋಪ್ವೇ ಯೋಜನೆಗಳಿಗೆ ಪ್ರಾಥಮಿಕ ಕಾರ್ಯಸಾಧ್ಯತಾ ವರದಿಗಳು ಈಗಾಗಲೇ ಸಿದ್ಧಗೊಂಡಿದೆ ಎಂದರು.‘ಗೋಕಾಕ್: ಮುಂದಿನ ಸಂಪುಟಕ್ಕೆ’ಕೆ.ಜೆ.ಜಾರ್ಜ್, ಪ್ರವಾಸೋದ್ಯಮ ಸಚಿವರೋಪ್ವೇ ಯೋಜನೆಗಳು ಪರಿಸರಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸಲಿವೆ. ಪ್ರವಾಸೋದ್ಯಮ ಹೂಡಿಕೆಗಳಿಗೆ ಹೊಸ ಅವಕಾಶ ತೆರೆದಿಡಲಿವೆ. ತ್ವರಿತ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳ ಸಹಕಾರ ಅಗತ್ಯ ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260714-51-1261361221