ಚಿಂಚೋಳಿ: ಶಾಲಾ ವಾಹನ ಡಿಕ್ಕಿ; ಬಾಲಕ ಸಾವು
ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಐನೋಳ್ಳಿಯಲ್ಲಿ ಶಾಲಾ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆರು ವರ್ಷದ ಬಾಲಕ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.ಗ್ರಾಮದ ಸಂಜೀವಕುಮಾರ ಸುರೇಶ ಮೃತ ಬಾಲಕ.ಐನೋಳ್ಳಿ ಮುಖ್ಯರಸ್ತೆಯಲ್ಲಿ ನಡೆದ ಈ ಅಪಘಾತದಲ್ಲಿ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗಾಗಿ ಚಿಂಚೋಳಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯುವ
ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಐನೋಳ್ಳಿಯಲ್ಲಿ ಶಾಲಾ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆರು ವರ್ಷದ ಬಾಲಕ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.ಗ್ರಾಮದ ಸಂಜೀವಕುಮಾರ ಸುರೇಶ ಮೃತ ಬಾಲಕ.ಐನೋಳ್ಳಿ ಮುಖ್ಯರಸ್ತೆಯಲ್ಲಿ ನಡೆದ ಈ ಅಪಘಾತದಲ್ಲಿ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗಾಗಿ ಚಿಂಚೋಳಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ಮೂಲಗಳು ಹೇಳಿವೆ.ಶಾಲೆಗೆ ಮಕ್ಕಳನ್ನು ಕರೆಯೊಯ್ಯುವ ವಾಹನ ಮಗುವಿನ ಮೇಲೆ ಹಾಯ್ದಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ಸುದ್ದಿ ತಿಳಿದು ನೂರಾರು ಮಂದಿ ತಾಲ್ಲೂಕು ಆಸ್ಪತ್ರೆ ಎದುರು ಜಮಾಯಿಸಿದ್ದರು.ಶಾಲಾ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ
Read the complete story at Prajavani