ರಾಜ್ಯದಲ್ಲಿ ಬರ ಪರಿಸ್ಥಿತಿ: ಅಗತ್ಯ ನೆರವು ನೀಡಿ; ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಭಾವದಿಂದಾಗಿ ಉದ್ಭವಿಸಿರುವ ತೀವ್ರ ಬರ ಪರಿಸ್ಥಿತಿಯನ್ನು ಮನಗಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದು, ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿರುವುದು, ಮುಂಗಾರು ಬಿತ್ತನೆ ವಿಳಂಬವಾಗಿರುವುದು ಹಾಗೂ ಕೃಷಿ ಮತ್ತು ಕುಡಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಭಾವದಿಂದಾಗಿ ಉದ್ಭವಿಸಿರುವ ತೀವ್ರ ಬರ ಪರಿಸ್ಥಿತಿಯನ್ನು ಮನಗಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದು, ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿರುವುದು, ಮುಂಗಾರು ಬಿತ್ತನೆ ವಿಳಂಬವಾಗಿರುವುದು ಹಾಗೂ ಕೃಷಿ ಮತ್ತು ಕುಡಿಯುವ ನೀರಿನ ಭದ್ರತೆಯ ಮೇಲಾಗುತ್ತಿರುವ ಗಂಭೀರ ಪರಿಣಾಮಗಳನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೂಡಲೇ ಕೇಂದ್ರದ ಅಧ್ಯಯನ ತಂಡವನ್ನು ನಿಯೋಜಿಸಬೇಕು ಹಾಗೂ ರಾಜ್ಯಕ್ಕೆ ತುರ್ತು ಪರಿಹಾರ ನೆರವು ನೀಡಬೇಕು ಎಂದು ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ವಿನಂತಿಸಿದ್ದಾರೆ.ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು, ರೈತರ ಹಿತರಕ್ಷಿಸಲು, ಜಲಮೂಲಗಳನ್ನು ಸಂರಕ್ಷಿಸಲು ಹಾಗೂ ಸಾರ್ವಜನಿಕರ ಸಂಕಷ್ಟವನ್ನು ತಗ್ಗಿಸಲು ಕರ್ನಾಟಕ ಸರ್ಕಾರವು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. Hon’ble Chief Minister Shri @DKShivakumar has written to Hon’ble Prime Minister Shri @narendramodi highlighting the emerging drought situation in Karnataka due to a significant monsoon deficit.With below-normal rainfall, reduced reservoir storage, delayed kharif sowing and… pic.twitter.com/MnKTr2YGKU— CM of Karnataka (@CMofKarnataka) July 14, 2026