ಶಾರುಖ್ ಖಾನ್ಗೆ ರಿಲೀಫ್ – `ಮನ್ನತ್’ ನವೀಕರಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ಬಾಲಿವುಡ್ ನಟ ಶಾರುಖ್ ಖಾನ್ (Sharukh Khan) ಹಾಗೂ ಅವರ ಪತ್ನಿ ಗೌರಿ ಖಾನ್ (Gauri Khan) ಅವರ `ಮನ್ನತ್ʼ ನಿವಾಸದ ನವೀಕರಣ ಪ್ರಶ್ನಿಸಿ ಮುಂಬೈ (Mumbai) ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಶಾರುಖ್ ಖಾನ್ ವಿರುದ್ಧ ದೂರು ದಾಖಲಿಸಿ, ಯೋಜನೆಗೆ ಅಗತ್ಯವಿರುವ ಶಾಸನಬದ್ಧ ಅನುಮೋದನೆಗಳು ಮತ್ತು ಪರ

ನವದೆಹಲಿ: ಬಾಲಿವುಡ್ ನಟ ಶಾರುಖ್ ಖಾನ್ (Sharukh Khan) ಹಾಗೂ ಅವರ ಪತ್ನಿ ಗೌರಿ ಖಾನ್ (Gauri Khan) ಅವರ `ಮನ್ನತ್ʼ ನಿವಾಸದ ನವೀಕರಣ ಪ್ರಶ್ನಿಸಿ ಮುಂಬೈ (Mumbai) ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಶಾರುಖ್ ಖಾನ್ ವಿರುದ್ಧ ದೂರು ದಾಖಲಿಸಿ, ಯೋಜನೆಗೆ ಅಗತ್ಯವಿರುವ ಶಾಸನಬದ್ಧ ಅನುಮೋದನೆಗಳು ಮತ್ತು ಪರಿಸರ ನಿಯಮಗಳನ್ನು ಪಾಲಿಸಲಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಶೋಯೇಬ್ ಆಲಂ, ಈ ಯೋಜನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅನುಮೋದನೆ ಅಗತ್ಯವಾಗಿತ್ತು. ಆದರೆ ಇಲ್ಲಿ ನಿಯಮಗಳ ಉಲ್ಲಂಘನೆ ಮುಂದುವರಿದಿದೆ. 5 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದ ಯೋಜನೆಗಳಿಗೆ ಇಂತಹ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ನಾರಿ ಮೂಲಕ ನಾಯಕನಾದ ಖಳನಟ ರವಿ ಕಲ್ಯಾಣ್ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಅರ್ಜಿದಾರರ ಉದ್ದೇಶವನ್ನು ಪ್ರಶ್ನಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, `ಮನ್ನತ್’ ಒಂದು ಖಾಸಗಿ ನಿವಾಸ. ಅಲ್ಲಿನ ನಿವಾಸಿಗಳು ತಮ್ಮ ಮನೆಯಲ್ಲಿ ಬದಲಾವಣೆ ಅಥವಾ ನವೀಕರಣ ಮಾಡಲು ಬಯಸಿದರೆ, ಕಾನೂನುಬದ್ಧವಾಗಿ ಅವರು ಹಾಗೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಪ್ರಕರಣವನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ ಮರುಪರಿಶೀಲನೆಗೆ ಕಳುಹಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿಕೊಂಡರು. ಆದರೆ ಸುಪ್ರೀಂ ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ. ಜೊತೆಗೆ ನಾವು ವ್ಯಕ್ತಿಯ ಜನಪ್ರಿಯತೆ ಅಥವಾ ಸೆಲೆಬ್ರಿಟಿ ಸ್ಥಾನಮಾನಕ್ಕೆ ಒಳಗಾಗಿ ತೀರ್ಪು ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ. ಇದಕ್ಕೂ ಮುನ್ನ, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಈ ಯೋಜನೆಯು ಪರಿಸರ ನಿಯಮಗಳಿಗೆ ಅನುಗುಣವಾಗಿದೆ ಮತ್ತು ನಿಯಮಾವಳಿಗಳ ಅಡಿಯಲ್ಲೇ ಅಗತ್ಯ ಅನುಮೋದನೆಗಳನ್ನು ನೀಡಲಾಗಿದೆ ಎಂದು ಹೇಳಿ, ವಿಸ್ತರಣಾ ಕಾಮಗಾರಿಗೆ ಸವಾಲು ಹಾಕಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದು ಮನ್ನತ್ ಬಂಗಲೆಯ ಕಾಮಗಾರಿ ಮುಂದುವರಿಯಲು ದಾರಿ ಮಾಡಿಕೊಟ್ಟಿತ್ತು.ಇದನ್ನೂ ಓದಿ: ಸಿದ್ದರಾಮಯ್ಯ & ಸತೀಶ್ ಜಾರಕಿಹೊಳಿ ಮಧ್ಯೆ ಭಿನ್ನಾಭಿಪ್ರಾಯ? ವಿವಾದದ ಹಿನ್ನೆಲೆ ಏನು? 2025ರ ಮಾರ್ಚ್ನಲ್ಲಿ ಸಾಮಾಜಿಕ ಕಾರ್ಯಕರ್ತ ಸಂತೋಷ್ ದೌಂಡ್ಕರ್ ಅವರು ಎನ್ಜಿಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಇದರಲ್ಲಿ ಜನವರಿ 3ರಂದು ಮಹಾರಾಷ್ಟ್ರ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಕರಾವಳಿ ನಿಯಂತ್ರಣ ವಲಯ ಅನ್ನು ಪ್ರಶ್ನಿಸಲಾಗಿತ್ತು. ಜೊತೆಗೆ `ಮನ್ನತ್’ ವಿಸ್ತರಣೆಯ ಅನುಮೋದನೆ ಪ್ರಕ್ರಿಯೆಯಲ್ಲಿ ಪರಿಸರ ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು ಆರೋಪಿಸಲಾಗಿತ್ತು. ಆದರೆ, ಈ ಯೋಜನೆಗೆ ಸಂಬಂಧಿಸಿದ ವ್ಯಕ್ತಿಗಳು ನಿಯಮಗಳ ಪ್ರಕಾರವೇ ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದ್ದರು. ವಿವಾದಕ್ಕೆ ಕಾರಣವಾಗಿದ್ದು ಏನು? ಗೌರಿ ಖಾನ್ ಅವರು ಮನ್ನತ್ನ 6 ಅಂತಸ್ತಿನ ಕಟ್ಟಡಕ್ಕೆ ಹೆಚ್ಚುವರಿಯಾಗಿ ಇನ್ನೂ ಎರಡು ಮಹಡಿಗಳನ್ನು ಸೇರಿಸಲು ಪ್ರಸ್ತಾಪಿಸಿದ್ದರು. ಈ ಪ್ರಸ್ತಾಪವೇ ಕರಾವಳಿ ಮತ್ತು ಪರಿಸರ ಅನುಮತಿಗಳ ಕುರಿತು ವಿವಾದಕ್ಕೆ ಕಾರಣವಾಗಿತ್ತು. ಈಗ ಸುಪ್ರೀಂ ಕೋರ್ಟ್ ಕೂಡ ಈ ಸವಾಲನ್ನು ಆಲಿಸಲು ನಿರಾಕರಿಸಿದ್ದು, ಅರ್ಜಿಯನ್ನು ಸಂಪೂರ್ಣವಾಗಿ ವಜಾಗೊಳಿಸಿದೆ.ಇದನ್ನೂ ಓದಿ: ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ