ಚುನಾವಣೆ ವೇಳೆ ಹಣ ಪತ್ತೆ: ಚುನಾವಣಾ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಲೋಕಸಭೆ ಚುನಾವಣೆ ವೇಳೆ ಯಲಹಂಕದ ಮಾದಾವರದ ಗೋವಿಂದಪ್ಪ ಎಂಬುವವರ ಮನೆಯಲ್ಲಿ ₹ 4.8 ಕೋಟಿ ಜಪ್ತಿ ಮಾಡಿದ ಪ್ರಕರಣದಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕ ಬಳ್ಳಾಪುರ ಸಂಸದ ಡಾ. ಕೆ.ಸುಧಾಕರ್ ಅವರ ವಿರುದ್ಧ ದಾಖಲಾಗಿದ್ದ ಎಫ್ಐ ಆರ್ ಅನ್ನು ಹೈಕೋರ್ಟ್ ರದ್ದುಪಡಿ

ನವದೆಹಲಿ: ಲೋಕಸಭೆ ಚುನಾವಣೆ ವೇಳೆ ಯಲಹಂಕದ ಮಾದಾವರದ ಗೋವಿಂದಪ್ಪ ಎಂಬುವವರ ಮನೆಯಲ್ಲಿ ₹ 4.8 ಕೋಟಿ ಜಪ್ತಿ ಮಾಡಿದ ಪ್ರಕರಣದಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕ ಬಳ್ಳಾಪುರ ಸಂಸದ ಡಾ. ಕೆ.ಸುಧಾಕರ್ ಅವರ ವಿರುದ್ಧ ದಾಖಲಾಗಿದ್ದ ಎಫ್ಐ ಆರ್ ಅನ್ನು ಹೈಕೋರ್ಟ್ ರದ್ದುಪಡಿಸಿ ರುವುದನ್ನು ಪ್ರಶ್ನಿಸಿ ಗೃಹ ಇಲಾಖೆಯು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ನೋಟಿಸ್ ಜಾರಿ ಮಾಡಿ ನಾಲ್ಕು ವಾರ ಮುಂದೂಡಿತು.2024ರ ಲೋಕಸಭೆ ಚುನಾವಣೆ ಮತದಾನದ ಹಿಂದಿನ ದಿನ, ಗೋವಿಂದಪ್ಪ ಅವರ ಮನೆಯಿಂದ ₹4.8 ಕೋಟಿ ಜಪ್ತಿ ಮಾಡಲಾಗಿತ್ತು. ‘ಈ ಹಣ ಮತದಾರರಿಗೆ ಹಂಚುವುದಕ್ಕಾಗಿ ಸಂಗ್ರಹಿಸಿದ್ದು’ ಎಂದು ಹೇಳಲಾಗಿತ್ತು. ಈ ಬೆನ್ನಲ್ಲೇ ಸುಧಾಕರ್ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯ ಜವಾಬ್ದಾರಿ ಹೊತ್ತಿದ್ದ ರಾಜ್ಯ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸ್ಆ್ಯಪ್ ಸಂದೇಶ ಕಳಿಸಿ, ‘ನೀವು ನನಗೆ ಸಹಾಯ ಮಾಡಿದರೆ ಆಭಾರಿಯಾಗಿರುತ್ತೇನೆ’ ಎಂದು ಕೇಳಿಕೊಂಡಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260714-4-45266112