ಪ್ರಿಯಾಂಕ್ ಖರ್ಗೆ ತವರಲ್ಲೇ 3 ಸಜಾ ಕೈದಿಗಳು ಜೈಲಿನಿಂದ ಪರಾರಿ
ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತವರು ಜಿಲ್ಲೆಯಲ್ಲಿರುವ ಕೇಂದ್ರ ಕಾರಾಗೃಹದಿಂದ (Kalaburagi Jail) ಮೂವರು ಸಜಾ ಕೈದಿಗಳು ಪರಾರಿಯಾಗಿದ್ದಾರೆ. ಮಸ್ತಾನ್,ಸಂತೋಷ್ ಹಾಗೂ ಸಾಗರ್ ಪರಾರಿಯಾದ ಕೈದಿಗಳು. ಬೀದರ್ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರ

ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತವರು ಜಿಲ್ಲೆಯಲ್ಲಿರುವ ಕೇಂದ್ರ ಕಾರಾಗೃಹದಿಂದ (Kalaburagi Jail) ಮೂವರು ಸಜಾ ಕೈದಿಗಳು ಪರಾರಿಯಾಗಿದ್ದಾರೆ. ಮಸ್ತಾನ್,ಸಂತೋಷ್ ಹಾಗೂ ಸಾಗರ್ ಪರಾರಿಯಾದ ಕೈದಿಗಳು. ಬೀದರ್ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ. ಇದನ್ನೂ ಓದಿ: 3 ವರ್ಷದ ಮಗು ಮೇಲೆ ಅತ್ಯಾಚಾರ – ಆರೋಪಿಗೆ 1 ಲಕ್ಷ ದಂಡ, ವಸೂಲಿ ಹಣದಲ್ಲಿ ಗುಂಡು-ತುಂಡು ಪಾರ್ಟಿ ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಮಧ್ಯರಾತ್ರಿ ಲಾಕಪ್ನಲ್ಲಿ ಇರಬೇಕಾದ ಕೈದಿಗಳನ್ನು ಜೈಲು ಸಿಬ್ಬಂದಿ ಯಾಕೆ ಹೊರಗೆ ಬಿಟ್ಟರು ಎಂಬ ಪ್ರಶ್ನೆ ಮೂಡಿದೆ. ಈ ಮೂಲಕ ಕೈದಿಗಳ ಪರಾರಿಗೆ ಜೈಲಿನ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು.3 ರಂದು ಸಹ ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಿಂದ (Afzalpur Police Station) ಪೋಕ್ಸೊ ಪ್ರಕರಣದ ಆರೋಪಿ ಮಂಜಾನಾಥ್ ಪರಾರಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಠಾಣೆಗೆ ಪೊಲೀಸರು ಕರೆತಂದಿದ್ದರು. ಇದನ್ನೂ ಓದಿ: ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದ ಪೋಕ್ಸೊ ಕೇಸ್ ಆರೋಪಿ ಪರಾರಿ