'ಜೈಲುಗಳ ಸ್ಥಿತಿ ಹೇಗಿತ್ತು' ಅವಲೋಕನ ಮಾಡಿಕೊಂಡರೆ ಒಳಿತು: ಬಿಜೆಪಿಗೆ ಪ್ರಿಯಾಂಕ್
ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂರು ಕೈದಿಗಳು ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪದಕ್ಕಾಗಿ ಸಂಬಂಧಿಸಿದ ಜೈಲಾಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಈ ನಡುವೆ ಬಿಜೆಪಿ ತಿರುಗೇಟು ನೀಡಿರುವ ಅವರು, ಬಿಜೆಪಿ ಅವಧಿಯಲ್ಲಿ 'ಜೈಲುಗಳ

ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂರು ಕೈದಿಗಳು ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪದಕ್ಕಾಗಿ ಸಂಬಂಧಿಸಿದ ಜೈಲಾಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಈ ನಡುವೆ ಬಿಜೆಪಿ ತಿರುಗೇಟು ನೀಡಿರುವ ಅವರು, ಬಿಜೆಪಿ ಅವಧಿಯಲ್ಲಿ 'ಜೈಲುಗಳ ಸ್ಥಿತಿ ಹೇಗಿತ್ತು' ಎಂಬುದನ್ನು ಅವಲೋಕನ ಮಾಡಿಕೊಂಡರೆ ಒಳಿತು ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್, ತಪ್ಪಿಸಿಕೊಂಡ ಕೈದಿಗಳ ಸೆರೆಗಾಗಿ ಪರಿಣಾಮಕಾರಿ ಕ್ರಮಗಳನ್ನು ಅನುಸರಿಸಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಇದರ ಪರಿಣಾಮವಾಗಿ ಓರ್ವ ಕೈದಿಯನ್ನು ಸೆರೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ನಾನು ಗೃಹಸಚಿವನಾಗಿ ಜವಾಬ್ದಾರಿ ವಹಿಸಿಕೊಂಡ ಮೇಲೆ ಗೃಹ ಇಲಾಖೆಯ ಪ್ರತಿ ವಿಭಾಗಗಳ ಪರಿಶೀಲನಾ ಸಭೆ ನಡೆಸಿ, ಆ ಎಲ್ಲಾ ವಿಭಾಗಗಳ ಬಲವರ್ಧನೆಗೆ, ಉನ್ನತಿಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕಾರಾಗೃಹಗಳ ಸ್ಥಿತಿಗತಿಗಳ ಪರಿಶೀಲನೆ ಮತ್ತು ಬಂಧಿಖಾನೆ ಸಿಬ್ಬಂದಿಗಳ ಕಾರ್ಯಕ್ಷಮತೆಯ ಪರಿಶೀಲನೆ ನಡೆಸಲಿದ್ದೇನೆ ಎಂದು ಭರವಸೆ ನೀಡಿದ್ದಾರೆ. ಜೈಲುಗಳ ಸುಧಾರಣೆ, ಭದ್ರತಾ ವ್ಯವಸ್ಥೆಯ ಉನ್ನತಿಕರಣ ಮತ್ತು ಅಕ್ರಮಗಳಿಗೆ ಕಡಿವಾಣದಂತಹ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಉಲ್ಲೇಖಿಸಿದ್ದಾರೆ. ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂರು ಖೈದಿಗಳು ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪದಕ್ಕಾಗಿ ಸಂಬಂಧಿಸಿದ ಜೈಲಾಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ,ಹಾಗೂ ತಪ್ಪಿಸಿಕೊಂಡ ಖೈದಿಗಳನ್ನು ಸೆರೆಗಾಗಿ ಪರಿಣಾಮಕಾರಿ ಕ್ರಮಗಳನ್ನು ಅನುಸರಿಸಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ…— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 15, 2026 ಬಿಜೆಪಿ ವಿರುದ್ಧ ವಾಗ್ದಾಳಿ...ಟೀಕೆಗಳಿಗೆ ಬಾಯ್ತೆರೆದು ಕುಳಿತಿರುವ ಬಿಜೆಪಿ ನಾಯಕರು ಒಮ್ಮೆ ತಮ್ಮ ಅವಧಿಯಲ್ಲಿ ರಾಜ್ಯದ ಜೈಲುಗಳ ಸ್ಥಿತಿ ಹೇಗಿತ್ತು ಎಂಬುದನ್ನು ಅವಲೋಕನ ಮಾಡಿಕೊಂಡರೆ ಒಳಿತು ಎಂದು ತಿರುಗೇಟು ನೀಡಿದ್ದಾರೆ. 2010ರಲ್ಲಿ ಇದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಿಂದ 8 ಕೈದಿಗಳು ಪರಾರಿಯಾಗಿದ್ದರು. ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಪ್ರಕರಣ ಎಂದು ಪರಿಗಣಿಸಬಹುದು.ಇದು ಅಂದಿನ ಗೃಹಸಚಿವರ ವೈಫಲ್ಯವೆಂದು ಬಿಜೆಪಿ ಹೇಳುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಅತಿಥಿ ಗೃಹವಾಗಿ ಬದಲಾಗಿ ಕೈದಿಗಳಿಗೆ ಸಕಲ ಸವಲತ್ತುಗಳು ದೊರಕುತ್ತಿದ್ದ ಸುದ್ದಿಗಳನ್ನು ರಾಜ್ಯ ನೋಡಿದೆ. ಇದು ಬಿಜೆಪಿ ಸರ್ಕಾರದ ವೈಫಲ್ಯ ಎಂಬುದನ್ನು ಒಪ್ಪಿಕೊಳ್ಳುತ್ತಾರಾ ಎಂದು ಕೇಳಿದ್ದಾರೆ. ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡೇಟು, ಬಂಧನಕೈದಿ ಬಯಸಿದ ಜೈಲಿಗೆ ವರ್ಗ ಸಾಧ್ಯವಿಲ್ಲ: ಹೈಕೋರ್ಟ್