ಬೆಳಗಾವಿ: ಮುಂದುವರಿದ ರೈತರ ಧರಣಿ ಸತ್ಯಾಗ್ರಹ
ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ನಮಗೆ ನ್ಯಾಯಯುತವಾಗಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿರೈತರು ಇಲ್ಲಿನ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನವಾದ ಬುಧವಾರವೂ ಮುಂದುವರಿಯಿತು.ಮಾಸ್ತಿಹೊಳಿ, ಗುಡಗನಟ್ಟಿ, ಬೀರನಹೊಳಿ,

ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ನಮಗೆ ನ್ಯಾಯಯುತವಾಗಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿರೈತರು ಇಲ್ಲಿನ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನವಾದ ಬುಧವಾರವೂ ಮುಂದುವರಿಯಿತು.ಮಾಸ್ತಿಹೊಳಿ, ಗುಡಗನಟ್ಟಿ, ಬೀರನಹೊಳಿ, ಸುತಗಟ್ಟಿ ಹಾಗೂ ಜಾರಕಿಹೊಳಿ ಗ್ರಾಮಗಳ 500ಕ್ಕೂ ಅಧಿಕ ರೈತರು ಮಂಗಳವಾರ ನೀರಾವರಿ ನಿಗಮದ ಕಚೇರಿ ಆವರಣದಲ್ಲೇ ಜಾನುವಾರುಗಳನ್ನು ಕಟ್ಟಿ ಸತ್ಯಾಗ್ರಹ ಆರಂಭಿಸಿದ್ದರು. ಅಲ್ಲಿಯೇ ಅಡುಗೆ ಮಾಡಿ ವಾಸ್ತವ್ಯ ಹೂಡಿದ್ದರು.ಬುಧವಾರ ಜಿಲ್ಲಾಧಿಕಾರಿ ಕಚೇರಿಯವರೆಗೆ ಜಾನುವಾರುಗಳ ಸಮೇತವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ನೀರಾವರಿ ನಿಗಮದ ಕಚೇರಿಗೆ ಮರಳಿ, ಮತ್ತೆ ಧರಣಿ ಮುಂದುವರಿಸಿದರು.‘ಅಭಿವೃದ್ಧಿ ಯೋಜನೆಗೆ ನಮ್ಮ ಕೃಷಿಭೂಮಿ ಪಡೆದಿದ್ದರೂ, ಸರಿಯಾಗಿ ಪರಿಹಾರ ಕೊಟ್ಟಿಲ್ಲ’ ಎಂದು ದೂರಿದರು.ರೈತರನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ‘ಈ ಪ್ರಕರಣದ ಕುರಿತು ಸಮಗ್ರವಾಗಿ ಪರಿಶೀಲಿಸಿ ಕ್ರಮ ವಹಿಸಲಾಗುವುದು’ ಎಂದರು. ಇದಕ್ಕೆ ರೈತರು ಒಪ್ಪದಿದ್ದಾಗ, ಸಂಜೆ 5.30ಕ್ಕೆ ನೀರಾವರಿ ನಿಗಮದ ಅಧಿಕಾರಿಗಳನ್ನು ಕರೆಯಿಸಿ ಸಭೆ ಮಾಡಲಾಗುವುದು ಎಂದು ಭರವಸೆ ಕೊಟ್ಟರು.ಆದರೆ, ‘ಸಂಜೆ ಜಿಲ್ಲಾಧಿಕಾರಿ ನಡೆಸಿದ ಸಭೆಯಲ್ಲಿ ನಮ್ಮ ಬೇಡಿಕೆ ಪೂರ್ಣ ಪ್ರಮಾಣದಲ್ಲಿ ಈಡೇರಿಲ್ಲ. ಹಾಗಾಗಿ ಧರಣಿ ಸತ್ಯಾಗ್ರಹ ಮುಂದುವರಿಸಲಾಗುವುದು’ ಎಂದು ರೈತ ಮುಖಂಡರು ಪ್ರಕಟಿಸಿದರು.ಮುಖಂಡ ಬಾಳೇಶ ಮಾವನೂರೆ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಸಂತೋಷ ಪಾಟೀಲ, ಮಲಗೌಡ ಪಾಟೀಲ, ಬಾಳೇಶ ಪಾಟೀಲ, ಉದಯ ಹಿರೇಮಠ, ಸಿದ್ಧಲಿಂಗ ಬೆನ್ನಾಡಿ, ರಾಜು ಹುದ್ದಾರ, ಭರಮಾ ಮುಂಗಾರಿ, ಬಾಳೇಶ ಪಾಶ್ಚಾಪುರೆ, ಪತ್ರೆಪ್ಪ ಮಾಲಾದಾನಿ ಇತರರಿದ್ದರು.