8KG ತೂಕ ಇಳಿಕೆ,ಸಾವು ಸಂಭವಿಸಬಹುದು: ವಾಂಗ್ಚೂಕ್ಗೆ ವೈದ್ಯಕೀಯ ನೆರವು ನೀಡಲು ಮನವಿ
ನವದೆಹಲಿ: ನಗರದ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಮ್ ವಾಂಗ್ಚೂಕ್ ಅವರಿಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಕೋರಿ ದೆಹಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.ವಕೀಲ ರಾಕೇಶ್ ಕುಮಾರ್ ಸೈನಿ ಅವರು ಅರ್ಜಿ ಸಲ್ಲಿಸಿದ್ದು, ವಾಂಗ್ಚೂಕ್ ಅವರನ್ನು ಕೂಡಲೇ ಆಸ್ಪತ್ರೆ

ನವದೆಹಲಿ: ನಗರದ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಮ್ ವಾಂಗ್ಚೂಕ್ ಅವರಿಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಕೋರಿ ದೆಹಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.ವಕೀಲ ರಾಕೇಶ್ ಕುಮಾರ್ ಸೈನಿ ಅವರು ಅರ್ಜಿ ಸಲ್ಲಿಸಿದ್ದು, ವಾಂಗ್ಚೂಕ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಸೂಕ್ತ ಆಹಾರ ನೀಡುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಾಂಗ್ಚೂಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.‘ವಾಂಗ್ಚೂಕ್ ಅವರ ಆರೋಗ್ಯ ವೇಗವಾಗಿ ಕ್ಷೀಣಿಸುತ್ತಿದ್ದು, ದೇಹದ ತೂಕ 8.5 ಕೆ.ಜಿ ಕಡಿಮೆಯಾಗಿದೆ. ಅವರು ಉಪವಾಸ ಹೀಗೆಯೇ ಮುಂದುವರಿಸಿದರೆ ಮುಂದಿನ ಎರಡು ದಿನದಲ್ಲಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯಿದೆ’ ಎಂದು ರಾಕೇಶ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಬುಧವಾರ ಪಿಐಎಲ್ ಕುರಿತು ವಿಚಾರಣೆ ನಡೆಸಲಿದೆ.ಜೂನ್ 28ರಂದು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಾಂಗ್ಚೂಕ್ ಭಾಗವಹಿಸಿದ್ದರು. ಅಂದಿನಿಂದಲೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.ಸಚಿವರ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ, ಜೂನ್ 20ರಿಂದಲೇ ಪ್ರತಿಭಟನೆ ನಡೆಸುತ್ತಿದೆ.