ವಾಂಗ್ಚೂಕ್ಗೆ 'ಕಾಕ್ರೋಚ್'ಗಳ ಬೆಂಬಲ: ಜುಲೈ 16ರಂದು ಸಾಮೂಹಿಕ ಉಪವಾಸ ಸತ್ಯಾಗ್ರಹ
ನವದೆಹಲಿ: ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚೂಕ್ ಅವರ ಉಪವಾಸ ಸತ್ಯಾಗ್ರಹವು 18ನೇ ದಿನಕ್ಕೆ ಕಾಲಿಟ್ಟಿದ್ದು, ಅವರಿಗೆ ಬೆಂಬಲ ಸೂಚಿಸಲು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಜುಲೈ 16ರಂದು ಸಾಮೂಹಿಕ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ.ನೀಟ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ

ನವದೆಹಲಿ: ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚೂಕ್ ಅವರ ಉಪವಾಸ ಸತ್ಯಾಗ್ರಹವು 18ನೇ ದಿನಕ್ಕೆ ಕಾಲಿಟ್ಟಿದ್ದು, ಅವರಿಗೆ ಬೆಂಬಲ ಸೂಚಿಸಲು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಜುಲೈ 16ರಂದು ಸಾಮೂಹಿಕ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ.ನೀಟ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ 26 ದಿನಗಳನ್ನು ಪೂರೈಸಿದೆ. ಸೋನಮ್ ವಾಂಗ್ಚೂಕ್ ಅವರು ಅನ್ಯಾಯವಾಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ಕೇಳುತ್ತಿದ್ದಾರೆ. ಸರ್ಕಾರವು ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿರುವುದು ಮಾತ್ರವಲ್ಲದೆ, ಕ್ರೂರವಾಗಿಯೂ ವರ್ತಿಸುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕೆಂದು ತಮ್ಮ ಜೀವವನ್ನೇ ಪಣಕ್ಕಿಟ್ಟ ವ್ಯಕ್ತಿಗೆ ಸರ್ಕಾರದಿಂದ ಕೇವಲ ಮೌನವಷ್ಟೇ ಸಿಕ್ಕಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪಿಸಿದ್ದಾರೆ.ವಿದ್ಯಾರ್ಥಿಗಳಿಗೆ ನ್ಯಾಯ, ಸೋನಮ್ ಅವರಿಗಾಗಿ ಪ್ರಾರ್ಥನೆಗಾಗಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೇವೆ. ನಮ್ಮೊಂದಿಗೆ ಕೈಜೋಡಿಸುವಂತೆ ಜನರಲ್ಲಿ ಮನವಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಪ್ರತಿಪಕ್ಷದ ನಾಯಕರು ಸಿಜೆಪಿಯನ್ನು ಏಕೆ ಬೆಂಬಲಿಸಿಲ್ಲ ಅಥವಾ ಸಿಜೆಪಿ ತಂಡದ ಪ್ರತಿಯೊಬ್ಬ ಸದಸ್ಯರೂ ಸೋನಮ್ ಸರ್ ಅವರೊಂದಿಗೆ ಏಕೆ ಉಪವಾಸ ಕುಳಿತಿಲ್ಲ ಎಂದು ಕೇಳುವ ಬದಲು, ನಿಜವಾಗಿ ಮುಖ್ಯವಾದ ಪ್ರಶ್ನೆಗಳನ್ನು ಕೇಳಿ. ಪ್ರಧಾನಮಂತ್ರಿಯವರು ಮಾತುಕತೆ ನಡೆಸಲು ಏಕೆ ನಿರಾಕರಿಸುತ್ತಿದ್ದಾರೆ? ಶಿಕ್ಷಣ ಸಚಿವರನ್ನು ಇನ್ನೂ ಏಕೆ ಹೊಣೆಗಾರರನ್ನಾಗಿ ಮಾಡುತ್ತಿಲ್ಲ? ಎಂದು ಪ್ರಶ್ನಿಸಿ ಎಂದಿದ್ದಾರೆ. ಕಳೆದ 18 ದಿನಗಳಿಂದ ಸೋನಮ್ ವಾಂಗ್ಚೂಕ್ ಅವರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರು 8.9 ಕೆ.ಜಿ ತೂಕ ಕಳೆದುಕೊಂಡಿದ್ದಾರೆ, ರಕ್ತದೊತ್ತಡ 105/76, ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗಿದೆ. ಆಕ್ಸಿಜನ್ ಸ್ಯಾಚುರೇಶನ್ ಶೇ. 97 ರಷ್ಟಿದ್ದು, ಅವರು ದೈಹಿಕವಾಗಿ ಅತ್ಯಂತ ದುರ್ಬಲರಾಗಿದ್ದಾರೆ ಎಂದು ವೈದರ ತಂಡ ಹೇಳಿದೆ. ಪ್ರತಿಭಟನಾ ಸ್ಥಳದಲ್ಲಿಯೇ ಮತ್ತೊಂದು ಪ್ರತ್ಯೇಕ ವೇದಿಕೆಯಲ್ಲಿ ಐಸಾ ಸಂಘಟನೆಯ ಮೂವರು ನಾಯಕರಾದ ಅದರ ಅಧ್ಯಕ್ಷೆ ನೇಹಾ, ಮನೀಶ್ ಮತ್ತು ಆಮೀನ್ ಅವರ ಉಪವಾಸ ಸತ್ಯಾಗ್ರಹವು 18ನೇ ದಿನಕ್ಕೆ ಕಾಲಿಟ್ಟಿದೆ.ಕಾಂಗ್ರೆಸ್ ಸಂಸದರಾದ ಶಶಿ ತರೂರ್, ಚಂದ್ರಶೇಖರ್ ಆಜಾದ್ ಮತ್ತು ಪ್ರಕಾಶ್ ಪಡೋಲೆ ಅವರು ಸಿಜೆಪಿಯ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.