ಆಗುಂಬೆಗೆ ಸತೀಶ್ ಜಾರಕಿಹೊಳಿ ಭೇಟಿ – ರಸ್ತೆ ಕಾಮಗಾರಿ, ಅಪಾಯಕಾರಿ ತಿರುವುಗಳ ಸ್ಥಿತಿ ಪರಿಶೀಲನೆ
ಉಡುಪಿ: ಜಿಲ್ಲೆಯ ಆಗುಂಬೆಗೆ (Agumbe) ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಭೇಟಿ ನೀಡಿ ರಸ್ತೆ ಕಾಮಗಾರಿ ಹಾಗೂ ಅಪಾಯಕಾರಿ ತಿರುವುಗಳ ಸ್ಥಿತಿಯನ್ನು ಪರಿಶೀಲಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷರ ನೇಮಕ, ಆಗುಂಬೆ ಸುರಂಗ ಯೋಜನೆ ಹಾಗೂ ಕಾರ್ಕಳ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವು ರಾ

ಉಡುಪಿ: ಜಿಲ್ಲೆಯ ಆಗುಂಬೆಗೆ (Agumbe) ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಭೇಟಿ ನೀಡಿ ರಸ್ತೆ ಕಾಮಗಾರಿ ಹಾಗೂ ಅಪಾಯಕಾರಿ ತಿರುವುಗಳ ಸ್ಥಿತಿಯನ್ನು ಪರಿಶೀಲಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷರ ನೇಮಕ, ಆಗುಂಬೆ ಸುರಂಗ ಯೋಜನೆ ಹಾಗೂ ಕಾರ್ಕಳ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವು ರಾಜಕೀಯ ಮತ್ತು ಆಡಳಿತಾತ್ಮಕ ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಭಾರತ್ ಟೆಕ್ಸ್–2026: ಕರ್ನಾಟಕದಲ್ಲಿ 2,821 ಕೋಟಿ ಹೂಡಿಕೆಗೆ ಒಪ್ಪಂದ ಆಗುಂಬೆ ಘಾಟ್ ರಸ್ತೆಯ ವಿವಿಧ ಭಾಗಗಳನ್ನು ವೀಕ್ಷಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ರಸ್ತೆ ಸುರಕ್ಷತೆಗೆ ಆದ್ಯತೆ ನೀಡುವುದಾಗಿ ಹೇಳಿದರು. ಆಗುಂಬೆಯಲ್ಲಿ ಸುರಂಗ ನಿರ್ಮಾಣದ ಬಗ್ಗೆ ತಜ್ಞರ ವರದಿ ಪಡೆದು ಬೆಂಗಳೂರಿನಲ್ಲಿ ಅರಣ್ಯ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು. ಸುರಂಗ ನಿರ್ಮಾಣ ಅತ್ಯಂತ ದುಬಾರಿ ಯೋಜನೆಯಾಗಿದ್ದು, ಅದರ ಕಾರ್ಯಸಾಧ್ಯತೆ ಪರಿಶೀಲಿಸಬೇಕಿದೆ. ರಸ್ತೆಯ ಮೂರು-ನಾಲ್ಕು ಅಪಾಯಕಾರಿ ತಿರುವುಗಳಿಗೆ ವಿಶೇಷ ಗಮನ ನೀಡಿ ಕಡಿಮೆ ವೆಚ್ಚದಲ್ಲಿ ಶೀಘ್ರ ಪರಿಹಾರ ಕಲ್ಪಿಸುವತ್ತ ಸರ್ಕಾರ ಮುಂದಾಗಲಿದೆ ಎಂದು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ನಾಳೆ ದೆಹಲಿಯಲ್ಲಿ ಸಭೆ ನಿಗದಿಯಾಗಿದ್ದು, ಎರಡು-ಮೂರು ದಿನಗಳಲ್ಲಿ ವಿಸ್ತರಣೆ ನಡೆಯುವ ನಿರೀಕ್ಷೆಯಿದೆ. ಸುಮಾರು ಇಪ್ಪತ್ತು ಸಚಿವ ಸ್ಥಾನಗಳು ಖಾಲಿ ಇರುವುದರಿಂದ ಪ್ರಕ್ರಿಯೆ ಶೀಘ್ರ ಪೂರ್ಣಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಜು.17ರಂದು ಫ್ರೀಡಂ ಪಾರ್ಕಿನಲ್ಲಿ ಬಿಜೆಪಿ ಜನಪ್ರತಿನಿಧಿಗಳ ಧರಣಿ: ಬಿವೈ ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕಾಣಿಸಿಕೊಳ್ಳುತ್ತಿಲ್ಲ ಎಂಬ ವದಂತಿಯನ್ನು ತಳ್ಳಿಹಾಕಿದ ಜಾರಕಿಹೊಳಿ, ತಮ್ಮ ಕೆಲಸ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಜಿಲ್ಲಾವಾರು ಪ್ರವಾಸ ಮಾಡಿ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ ವಿಚಾರವಾಗಿ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ನಮ್ಮವರೇ. ಅವರು ಅಧ್ಯಕ್ಷರಾದರೂ ನಾವು ಅಧ್ಯಕ್ಷರಾದರೂ ಒಂದೇ. ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಸಂಘಟನೆ ಬಲಪಡಿಸಲು ಕೆಲಸ ಮಾಡುತ್ತೇವೆ ಎಂದು ಹೇಳಿದರು. ಉಡುಪಿ ಜಿಲ್ಲೆಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ, ಪ್ರಸ್ತುತ ಮಂಗಳೂರಿನಿಂದ ಯು.ಟಿ.ಖಾದರ್ ಸಚಿವರಾಗಿರುವ ಕಾರಣ ಸದ್ಯಕ್ಕೆ ಉಡುಪಿ ಜಿಲ್ಲೆಗೆ ಅವಕಾಶ ಸಿಗುವುದು ಕಷ್ಟ ಎಂದು ಹೇಳಿದರು. ಕಾರ್ಕಳ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಸಚಿವರು, ಸರ್ಕಾರವೇ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡುತ್ತಿದೆ. ಮುಂದಿನ ವರ್ಷ ನಡೆಯಲಿರುವ ಕಾರ್ಕಳ ಮಹಾಮಸ್ತಕಾಭಿಷೇಕ ಸರ್ಕಾರದ ಕಾರ್ಯಕ್ರಮವಾಗಿರುವುದರಿಂದ ಅಗತ್ಯ ಅನುದಾನವನ್ನು ಸರ್ಕಾರ ಖಂಡಿತವಾಗಿ ನೀಡಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ನಾನು 5 ಟೌನ್ಶಿಪ್ ಮಾಡಲು ತೀರ್ಮಾನಿಸಿದ್ದೆ, ಇದನ್ನ ನೂರಾರು ಬಾರಿ ಹೇಳಿದ್ದೇನೆ: ಹೆಚ್ಡಿಕೆ